ಬೆಳಗಾವಿ ಪಾಲಿಕೆಗೆ ಶೋಭಾ ಸೋಮನಾಚೆ ನೂತನ ಮೇಯರ್‌, ರೇಷ್ಮಾ ಪಾಟೀಲ ಉಪಮೇಯರ್‌

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಗೆ ನೂತನ ಮೇಯರ್ ಹಾಗೂ ಉಪಮೇಯರ್‌ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಳಗಾವಿ ಮಹಾನಗರಪಾಲಿಕೆಗೆ ಶೋಭಾ ಸೋಮನಾಚೆ ಅವರು ನೂತನ ಮೇಯರ್ ಹಾಗೂ ರೇಷ್ಮಾ ಪಾಟೀಲ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಒಂದೂವರೆ ವರ್ಷದ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಆದರೆ, ಕೆಲ ಕಾರಣಗಳಿಂದ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಇಂದು ನಡೆದ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿಯವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಮೇಯರ್‌ ಆಗಿ ಶೋಭಾ ಸೋಮನಾಚೆ ಅವಿರೋಧವಾಗಿ ಆಯ್ಕೆಯಾದರು. ಉಪಮೇಯರ್‌ ಸ್ಥಾನಕ್ಕೆ ಚುನಾವಣೆ ನಡೆದು ರೇಷ್ಮಾ ಪಾಟೀಲ್‌ 42 ಮತಗಳನ್ನು ಪಡೆದರೆ, ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂಇಎಸ್ (MES) ಅಭ್ಯರ್ಥಿ ವೈಶಾಲಿ ಭಾತಖಾಂಡೆ ಕೇವಲ 4 ಮತ ಪಡೆದರು. ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಪ್ರಕ್ರಿಯೆ ವೇಳೆ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ (Congress) ಸದಸ್ಯರು ಹೊರನಡೆದು, ಚುನಾವಣೆಗೆ ಬಹಿಷ್ಕಾರ ಹಾಕಿದರು.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿತ್ತು. ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಾದ ಅಭಯ್ ಪಾಟೀಲ ಮತ್ತು ಅನಿಲ್ ಬೆನಕೆ ಅವರು ಮಹತ್ವದ ಪಾತ್ರ ವಹಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಮೇಯರ್ ಸ್ಥಾನ ಮರಾಠಿ ಭಾಷಿಕರ ಪಾಲಾಗಿರುವುದು
ಗಮನಾರ್ಹ ಸಂಗತಿಯಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ : ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ ಯತ್ನಾಳ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement