ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭಗೊಂಡ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯಿಂದ ಪುಣೆಗೆ ನೇರವಾಗಿ ಸಂಪರ್ಕಿಸುವ ವಿಮಾನ ಸೇವೆ ಆರಂಭವಾಗಿದೆ.‌ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು. ಮೊದಲ ದಿನವೇ ವಿಮಾನವು ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗಿತ್ತು. ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ನೇರ ವಿಮಾನ ಸೇವೆ ಸಹಕಾರಿಯಾಗಲಿದೆ.
ರಾಜ್ಯದ ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿರುವ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಸಂಸ್ಥೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement