ಕಲುಷಿತ ಆಹಾರ ಸೇವನೆ: ಅಸ್ವಸ್ಥಗೊಂಡ ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು

ಮಂಗಳೂರು : ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಕ್ತಿನಗರದ ಹಾಸ್ಟೆಲ್‌’ನಲ್ಲಿ ಸೋಮವಾರ ನಡೆದ ವರದಿಯಾಗಿದೆ.
ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ಸೇವಿಸಿದ್ದ ಹಾಸ್ಟೆಲ್’ನ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌’ನ ನೀರಿನ ಮಾದರಿಗಳ ಪರೀಕ್ಷೆ ಸಹ ನಡೆಸಲಾಗುತ್ತದೆ. ಆಹಾರ ಕಲುಷಿತಗೊಳ್ಳಲು ಕಾರಣ ಏನೆಂಬುದು ಪರೀಕ್ಷೆಯ ವರದಿ ಕೈಸೇರಿದ ಬಳಿಕವಷ್ಟೇ ತಿಳಿದು ಬರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ರಾಜೇಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಶಕ್ತಿನಗರದಲ್ಲಿ ಹಾಸ್ಟೆಲ್‌’ನಲ್ಲಿ ವಾಸವಿದ್ದ ಸಿಟಿ ಕಾಲೇಜ್ ಆಫ್‌ ನರ್ಸಿಂಗ್ ಸಂಸ್ಥೆಯ ವಿದ್ಯಾರ್ಥಿನಿಯರು ಸೋಮವಾರ ಆಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರು. ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಹೊಟ್ಟೆ ನೋವು, ವಾಂತಿ-ಭೇದಿ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ನಗರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು.
ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್‌, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹಾಗೂ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಕೆ.ಜಗದೀಶ, ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ ಮೊದಲಾದವರು ಸಿಟಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಅನೇಕ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದು ಹಾಸ್ಟೆಲ್‌’ಗೆ ಮರಳಿದ್ದಾರೆ. ಕೆಲ ವಿದ್ಯಾರ್ಥಿನಿಯರು ಆಸ್ಪತ್ರೆಯಲ್ಲಿ ಇದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement