ಜೆಡಿಎಸ್ ಶಾಸಕ ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಭೋಜೆ ಗೌಡ ಅವರು ವಿರುದ್ಧ ಗುಡುಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಪ್ರಹ್ಲಾದ ಜೋಶಿ ಅವರು, ನೈಜ ದಾಖಲೆಯನ್ನು ಮರೆ ಮಾಚಲಾಗಿದೆ ಹಾಗೂ ಹೆಸರಿನ ಮೇಲೆ ಬ್ಲರ್‌ ಮಾಡಲಾಗಿದೆ ಎಂದು ಹೇಳಿದ್ದು, ಅದನ್ನುಅವರು  ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಭೋಜೇಗೌಡರು ಆರೋಪ ಮಾಡುವಾಗ ದಾಖಲೆ ಮರೆಮಾಚಿದ್ದೇಕೆ ಎಂದು ಪ್ರಶ್ನಿಸಿರುವ ಅವರು, ಭೋಜೇಗೌಡರು ಹೇಳುವ ವ್ಯಕ್ತಿ ನಮ್ಮ ಕಚೇರಿಯಲ್ಲೇ ಇಲ್ಲ. ಅಷ್ಟಕ್ಕೂ ಭೋಜೇಗೌಡರು ಪ್ರದರ್ಶಿಸಿರುವ ಪತ್ರ ಡಾಕ್ಟರೊಬ್ಬರಿಗೆ ಬರೆದ ಪತ್ರವಾಗಿದೆ. ನಾನು ಡಾಕ್ಟರ್ ಅಂತೂ ಅಲ್ಲ. ನನ್ನ ಕಚೇರಿಗೂ ಇದಕ್ಕೂ ಸಂಬಂಧವಿಲ್ಲ. ಭೋಜೇ ಗೌಡರು ಹುರುಳಿಲ್ಲದ ಹಾಗೂ ಜನರನ್ನು ದಾರಿ ತಪ್ಪಿಸುವ ಆಪಾದನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ಭೋಜೇಗೌಡರಿಗೆ ತಮ್ಮ ದಾಖಲೆಯ ಮೇಲೆ ವಿಶ್ವಾಸವಿದ್ದರೆ ಹೆಸರನ್ನು ಬ್ಲರ್‌ ಯಾಕೆ ಮಾಡಿದ್ದಾರೆ ?’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ. ಅಲ್ಲದೆ ಡಾ.ಹರ್ಷ ವರ್ಧನ ಅವರು ಬರೆದಿರುವ ಪತ್ರವನ್ನು ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಈ ಆಧಾರರಹಿತ ಆಪಾದನೆಯನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ಇದು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದ್ದು, ಭೋಜೇಗೌಡರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ನಾನು ಯೋಚಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂದು ಭೋಜೇಗೌಡರು ಆರೋಪಿಸಿದ್ದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್‌ ಅಯ್ಯಣ್ಣ ಎಂಬುವವರನ್ನು ನೇಮಿಸುವುದಕ್ಕಾಗಿ ಜೋಶಿಯವರ ಕಚೇರಿಯ ಸಿಬ್ಬಂದಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಈಗ ಪ್ರಹ್ಲಾದ ಜೋಶಿ ಅವರು, ಈ ಹಿಂದೆ ಕೇಂದ್ರ ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಅವರು ಡಾ. ಬಿ.ಡಿ. ಪಾಂಡೆ ಎಂಬುವವರಿಗೆ ಬರೆದಿದ್ದ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಭೋಜೇಗೌಡರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಹಾಗೂ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement