2022ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2.75 ಕೋಟಿ ಮಂದಿ ಪ್ರಯಾಣ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಹೊಸ ದಾಖಲೆ ಬರೆದಿದೆ. 2022 ರಲ್ಲಿ ಇಲ್ಲಿಂದ 2.75 ಕೋಟಿ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ..!
2022 ರಲ್ಲಿ ವಿಮಾನ ನಿಲ್ದಾಣವು ದೇಶೀಯ ವಲಯದಲ್ಲಿ 85 ಪ್ರತಿಶತದಷ್ಟು ಚೇತರಿಕೆ ಕಂಡಿದ್ದು, ಅಂತಾರಾಷ್ಟ್ರೀಯ ವಲಯದಲ್ಲಿ 65 ಪ್ರತಿಶತದಷ್ಟು ಚೇತರಿಕೆ ಕಂಡಿದೆ. 2019 ರ ವರ್ಷಕ್ಕೆ ಹೋಲಿಸಿದರೆ 2022 ರಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಶೇಕಡಾ 82ರಷ್ಟು ಹೆಚ್ಚು ಪ್ರಯಾಣಿಕರ ದಟ್ಟಣೆಯನ್ನು ದಾಖಲಿಸಿದೆ.
2022 ರಲ್ಲಿ ಸುಮಾರು 2.436 ಕೋಟಿ ದೇಶೀಯ ಪ್ರಯಾಣಿಕರು ಮತ್ತು 31.4 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ. 2022ರ ಡಿಸೆಂಬರ್ 23ರಂದು ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರಯಾಣಿಕರು 1,07,825 ಮಂದಿ ಪ್ರಯಾಣಿಸಿ ದಾಖಲೆ ಬರೆದಿದ್ದಾರೆ. 2022 ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ ದೆಹಲಿ, ಮುಂಬೈ, ಕೋಲ್ಕತ್ತಾ, ಕೊಚ್ಚಿ ಮತ್ತು ಹೈದರಾಬಾದ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಪ್ರಯಾಣ ಮಾಡಿದ್ದು, ಇವು ದೇಶೀಯ ಸಂಚಾರಕ್ಕೆ ಸರಿಸುಮಾರು ಶೇಕಡಾ 40 ರಷ್ಟು ಕೊಡುಗೆ ನೀಡಿವೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಅನ್ಲಿಮಿಟೆಡ್ ಕ್ರಿಕೆಟ್ ಲೈವ್‌ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳಿಗೆ ಜಿಯೋದಿಂದ ಅನ್ಲಿಮಿಟೆಡ್ ಕ್ರಿಕೆಟ್ ಪ್ಲಾನ್

ದುಬೈ, ಮಾಲೆ, ಸಿಂಗಾಪುರ್, ದೋಹಾ ಮತ್ತು ಅಬುಧಾಬಿಗಳು ಅಂತಾರಾಷ್ಟ್ರೀಯ ಸಂಚಾರಕ್ಕೆ ಸರಿಸುಮಾರು ಶೇಕಡಾ 47ರಷ್ಟು ಕೊಡುಗೆ ನೀಡಿರುವ ಅಂತಾರಾಷ್ಟ್ರೀಯ ಮಾರ್ಗಗಳಾಗಿ ಹೊರಹೊಮ್ಮಿವೆ. 2022ರ ಡಿಸೆಂಬರ್‌ ತಿಂಗಳಲ್ಲಿ ಸುಮಾರು 31.3 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ಮಂಗಳವಾರ ವಿಮಾನ ನಿಲ್ದಾಣದ ಅಧಿಕಾರಿಗಳು ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.
ಕೋವಿಡ್‌ ಬಳಿಕ ಬಹುತೇಕ ವಿಮಾನಯಾನ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದು, 2022ರಲ್ಲಿ ಹೆಚ್ಚಿನ ಸಂಖ್ಯೆಯ ನಗರಗಳಿಗೆ ಸಂಪರ್ಕ ಕಲ್ಪಿಸಿವೆ. ಪ್ರಸ್ತುತ ಕೆಂಪೇಗೌಡ ವಿಮಾನ ನಿಲ್ದಾಣವು ಭಾರತದಾದ್ಯಂತ 75 ಸ್ಥಳಗಳಿಗೆ ಸಂಪರ್ಕ ಹೊಂದಿದೆ. ಇತ್ತೀಚೆಗೆ 16 ಸ್ಥಳಗಳು ಹೊಸದಾಗಿ ಸೇರ್ಪಡೆಗೊಂಡಿವೆ. 100ಕ್ಕೂ ಹೆಚ್ಚು ದೈನಂದಿನ ನಿರ್ಗಮನಗಳೊಂದಿಗೆ, ವಿಮಾನ ನಿಲ್ದಾಣದಲ್ಲಿ ವರ್ಗಾವಣೆಯಾಗುವ ಪ್ರಯಾಣಿಕರ ಪಾಲು ಶೇ.15 ಕ್ಕೆ ಹೆಚ್ಚಾಗಿದೆ.
2022 ರಲ್ಲಿ ದೇಶೀಯ ಸರಕು ಸಾಗಣೆಯಲ್ಲಿ ಶೇಕಡಾ 8 ರಷ್ಟು ಹೆಚ್ಚಳ ದಾಖಲಾಗಿದೆ. 4 ದೇಶೀಯ ಮತ್ತು ವಿದೇಶಿ ಸರಕು ವಾಹಕಗಳು 41 ನೇರ ಮಾರ್ಗಗಳಲ್ಲಿಕಾರ್ಯನಿರ್ವಹಿಸುತ್ತಿವೆ. ಇದು ದೇಶದ ಅಗ್ರ ಕಾರ್ಗೋ ವಿಮಾನ ನಿಲ್ದಾಣಗಳಲ್ಲಿ ಸ್ಥಾನ ಪಡೆದುಕೊಂಡಿದೆ.
2022ರಲ್ಲಿ ಸರಕು ಪ್ರಮಾಣವು 412,668 ಮೆಟ್ರಿಕ್‌ ಟನ್‌ ಆಗಿದ್ದು, ಇದು ವಿಮಾನ ನಿಲ್ದಾಣದ ಪ್ರಾರಂಭದ ದಿನದಿಂದ ಈವರೆಗೆ ನಿರ್ವಹಿಸಲಾದ ಅತ್ಯಧಿಕ ಪ್ರಮಾಣದ ಸರಕಾಗಿದೆ. 2022ರಲ್ಲಿ ದೇಶೀಯ ಸರಕು ಶೇ. 8ರಷ್ಟು ಹೆಚ್ಚಳವಾಗಿದೆ.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement