ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ, ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಹಣ ನೀಡಿದ್ದೇನೆ: ಗೋಕರ್ಣದಲ್ಲಿ ಅರ್ಚಕರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಎಚ್‌ಡಿಕೆ

ಗೋಕರ್ಣ: ನಾನು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ,ನಾನು ಅಂತಹ ಹೇಳಿಕೆ ನೀಡಿಲ್ಲ ಎಂದು ಮಾಜಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ.
ಬ್ರಾಹ್ಮಣ ಸಮುದಾಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆಯಿಂದ ವಿವಾದ ಭಿಗಿಲೆದ್ದಿದ್ದು, ಇಂದು, ಬುಧವಾರ ಉತ್ತರಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಹಂತದ ಪಂಚರತ್ನ ರಥಯಾತ್ರೆ ಪ್ರಾರಂಭಿಸುವ ಮುನ್ನ ಗೋಕರ್ಣದಲ್ಲಿರುವ ಶ್ರೀ ಮಹಾಬಲೇಶ್ವರ ಸನ್ನಧಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಅರ್ಚಕರು, ನಿಮ್ಮ ಕುಟುಂಬದ ಮೇಲೆ ನಮಗೆ ಅಭಿಮಾನವಿದೆ. ಆದರೆ ನಿಮ್ಮ ಹೇಳಿಕೆಯಿಂದ ನಮಗೆ ಬೇಸರಾವಾಗಿದೆ. ಗೋಕರ್ಣ ಕ್ಷೇತ್ರದಲ್ಲಿ ಈ ಬಗ್ಗೆ ನಿಮ್ಮ ಸ್ಪಷ್ಟೀಕರಣ ತಿಳಿಸಿ ಎಂದು ಹೇಳಿದ್ದಾರೆ.

ಗೋಕರ್ಣದಲ್ಲಿರುವ ಶ್ರೀ ಮಹಾಬಲೇಶ್ವರ ದೇವರಿಗೆ ಹಾಗೂ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಲು ಸಹಾಯ ಮಾಡಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಬ್ರಾಹ್ಮಣ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿಕೊಟ್ಟಿದ್ದೆ. ಜೊತೆಗೆ ನನ್ನ ಅವಧಿಯಲ್ಲಿ ಬ್ರಾಹ್ಮಣ ಪ್ರಾಧಿಕಾರವನ್ನೂ ರಚನೆ ಮಾಡಲಾಗಿತ್ತು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

ಸರ್ವೆ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣ ಸಮುದಾಯದ ಧ್ಯೇಯ ನಮಗೆ ಬೇಕೇ ಹೊರತು ಸಾವರ್ಕರ್‌ ಸಂಸ್ಕೃತಿ ಅಲ್ಲ, ಬ್ರಾಹ್ಮಣ ಸಮುದಾಯದ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದು ಹೇಳಿದರು. ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ ಎಂದು ಹಿಂದೂಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ಬಿಜೆಪಿಯವರು ಏನು ಮಾಡಿದ್ದಾರೆ ಎಂಬುದು ಗೊತ್ತಿದೆ. ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನು ಮಾಡಿದೆ ಹೇಳಲಿ ಎಂದು ಪ್ರಶ್ನಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು ಅವರಿಗೆ ರಾಜಕೀಯ ಎಲ್ಲಿ ಗೊತ್ತಿದೆ? ಅವರು ಕಟೀಲು ಎಂಬ ಹೆಸರಿನ ಬದಲಿಗೆ ಪಿಟೀಲು ಎಂದು ಇಟ್ಟುಕೊಳ್ಳಿ ಎಂದು ಟೀಕಿಸಿದರು.

5 / 5. 1

ಶೇರ್ ಮಾಡಿ :

  1. geek

    ಕುಮಾರಸ್ವಾಮಿಯವರ ಮಾತು ಅತ್ಯಂತ ಸೂಕ್ತವಾಗಿದೆ. ಸರ್ವೇಜನಾಃ ಸುಖಿನೋ ಭವಂತು ಎಂದು ಹಾರೈಸುವ ಬ್ರಾಹ್ಮಣ ಸಮುದಾಯದವರೇ ಬೇರೆ ಮತ್ತು ಹಿಂದುತ್ವವಾದಿ ಕೋಮುವಾದಿ ಬ್ರಾಹ್ಮಣರೇ ಬೇರೆ. ಬ್ರಾಹ್ಮಣ ಸಮುದಾಯಕ್ಕೆ ಅತ್ಯಂತ ಗೌರವ ಸಲ್ಲಿಸುವವರಲ್ಲಿ ದೇವೇಗೌಡರ ಕುಟುಂಬದವರು ಮೊದಲನೇ ಸ್ಥಾನದಲ್ಲಿ ನಿಲ್ಲುತ್ತಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement