ಫೆಬ್ರವರಿ 14, ‘ಗೋವು ಅಪ್ಪುಗೆಯ ದಿನ’ ಎಂದು ಆಚರಿಸಿ: ಕೇಂದ್ರದ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಮನವಿ

ನವದೆಹಲಿ: ಗೋವುಗಳ ಬಗ್ಗೆ ಅಪಾರ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಪ್ರೇಮಿಗಳ ದಿನವಾಗಿ ಆಚರಿಸಲಾಗುವ ಫೆಬ್ರವರಿ 14 (ಮಂಗಳವಾರ) ರಂದು ಗೋವು ಅಪ್ಪುಗೆ ದಿನ (Cow Hug Day) ಎಂದು ಆಚರಿಸಲು ಜನರಿಗೆ ಮನವಿ ಮಾಡಿದೆ.
“ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ನಮ್ಮ ಜೀವನವನ್ನು ಪೋಷಿಸುತ್ತದೆ ಮತ್ತು ಪಶು ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪ್ರತಿನಿಧಿಸುತ್ತದೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ ಇದನ್ನು “ಕಾಮಧೇನು” ಮತ್ತು “ಗೋಮಾತಾ” ಎಂದು ಕರೆಯಲಾಗುತ್ತದೆ. ಮಾನವೀಯತೆಗೆ ಎಲ್ಲ ಸಂಪತ್ತನ್ನು ಒದಗಿಸುತ್ತವೆ ಎಂದು ಪ್ರಾಣಿ ಕಲ್ಯಾಣ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.
ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದು ಮಂಡಳಿ ಹೇಳಿದೆ. ಪ್ರಾಣಿ ಕಲ್ಯಾಣ ಮಂಡಳಿಯ ಪ್ರಕಾರ, ಅದರ ಅಪಾರ ಪ್ರಯೋಜನಗಳಿಂದಾಗಿ, ಹಸುಗಳನ್ನು ತಬ್ಬಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ ಮತ್ತು ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ಹೆಚ್ಚಿಸುತ್ತದೆ.
ಕಾಲಾನಂತರದಲ್ಲಿ ಪಶ್ಚಿಮ ಸಂಸ್ಕೃತಿಯ ಪ್ರಗತಿಯಿಂದಾಗಿ ವೇದಿಕ್‌ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ ಎಂದು ಅದು ಹೇಳಿದೆ.
ಆದ್ದರಿಂದ, ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಗೋವು ಅಪ್ಪುಗೆ ದಿನ (Cow Hug Day) ಎಂದು ಆಚರಿಸಬಹುದು, ತಾಯಿ ಹಸುವಿನ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಜೀವನವನ್ನು ಸಂತೋಷದಿಂದ ಮತ್ತು ಸಕಾರಾತ್ಮಕ ಶಕ್ತಿಯಿಂದ ತುಂಬಬಹುದು. ಇದನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆಯೊಂದಿಗೆ ಮತ್ತು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದ ಮೇರೆಗೆ ನೀಡಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ಸುದ್ದಿ :-   ಸಂಗಾತಿಗಳಲ್ಲಿ ಒಬ್ಬರು ವಿವಾಹಿತರಾಗಿದ್ದರೆ ಲಿವ್-ಇನ್ ಸಂಬಂಧ ಮಾನ್ಯವಾಗುವುದಿಲ್ಲ : ಮದ್ರಾಸ್ ಹೈಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement