ಫೆಬ್ರವರಿ 11 ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ರಾಜ್ಯಕ್ಕೆ ಕರೆಸಿಕೊಳ್ಳುತ್ತಿದೆ.
ರಾಜ್ಯಕ್ಕೆ ಭೇಟಿ ನೀಡಿ 15 ದಿನ ಕಳೆದ ನಂತರ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿರುವ ಅಮಿತ್ ಶಾ ಅವರು ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಪುತ್ತೂರಿನಲ್ಲಿ ನಡೆಯಲಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ
ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ತೆಂಕಿಲದ ವಿವೇಕಾನಂದ ಶಾಲಾ ಮೈದಾನದಲ್ಲಿ ಬಿಜೆಪಿಯಿಂದ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಜನವರಿ 28ರಂದು ಬೆಳಗಾವಿ ಮತ್ತು ಹುಬ್ಬಳ್ಳಿ ಹಾಗೂ ಧಾರವಾಡದ ಎರಡು ಕಾರ್ಯಕ್ರಮಗಳಿಗೆ ಆಗಮಿಸಿದ್ದ ವೇಳೆಯಲ್ಲಿ ಕುಂದಗೋಳದಲ್ಲಿ ಬೂತ್ ಮಟ್ಟದ ವಿಜಯಸಂಕಲ್ಪ ಸಮಾವೇಶ, ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದ ಅವರು ಅದೇ ದಿನ ಸಂಜೆ ಬೆಳಗಾವಿಯಲ್ಲಿ ಪಕ್ಷದ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಮಿತ್ ಶಾ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ಮತ್ತೆ ಮೋದಿ ಆಗಮನ: ಫೆಬ್ರವರಿ 11ಕ್ಕೆ ಅಮಿತ್ ಶಾ ರಾಜ್ಯ ಪ್ರವಾಸ ಮಾಡಿದರೆ ಪ್ರಧಾನಿ ನರೇಂದ್ರಮೋದಿ ಫೆಬ್ರವರಿ 13ಕ್ಕೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023ಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ನಂತರ ಫೆಬ್ರವರಿ 27ರಂದು ಮತ್ತೊಮ್ಮೆ ನರೇಂದ್ರಮೋದಿ ರಾಜ್ಯಕ್ಕೆ ಆಗಮಿಸಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಫೆ. 27ರಂದು ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಅಮಿತ್ ಶಾ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಮೂರು ತಿಂಗಳು ರಾಜ್ಯದಲ್ಲಿ ಬಿಡುವಿಲ್ಲದ ಪ್ರಚಾರ ಕಾರ್ಯಗಳನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಪ್ರಸಕ್ತ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಪೂರ್ಣ ಪ್ರಮಾಣದಲ್ಲಿ ಪ್ರಚಾರ ಕಾರ್ಯ ನಡೆಸಲಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement