ಬೆಂಗಳೂರು: ಕೋಲಾರದಲ್ಲಿ ಅರಣ್ಯಾಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಡಿಸಿಎಫ್ ವೆಂಕಟೇಶ ಮನೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರದಲ್ಲಿ ಡಿಸಿಎಫ್ ವೆಂಕಟೇಶ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 8 ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಎಸ್ಪಿ ಉಮೇಶ ನೇತೃತ್ವದಲ್ಲಿ ದಾಳಿಯಾಗಿದೆ. 8 ತಂಡಗಳಾಗಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕೋಲಾರ ಸಾಮಾಜಿಕ ಅರಣ್ಯ ಡಿಎಫ್‌ಒ ವೆಂಕಟೇಶ ಅವರ ಕೋಲಾರ ಹಾಗೂ ಬೆಂಗಳೂರು ಹಾಗೂ ರಾಮನಗರದ ಮನೆ, ಕಚೇರಿ ಹಾಗು ಅವರಿಗೆ ಸಂಬಂಧಿಸಿದ ಇತರ ಕೆಲವು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ