ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ ಕೊಂಚ ನಿರಾಳ, ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರಗೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ.
ಡಿ.ಕೆ ಶಿವಕುಮಾರ ವಿರುದ್ಧದ ತನಿಖೆಗೆ ಫೆಬ್ರವರಿ 24ರವರೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿದೆ. ತಮ್ಮ ವಿರುದ್ಧದ ಪ್ರಕರಣಗಳ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮರ್ ಅರ್ಜಿ ಸಲ್ಲಿಸಿದ್ದರು.
ತನಿಖಾಧಿಕಾರಿ ಫೆಬ್ರವರಿ 24ರೊಳಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಲಿ, ಅಲ್ಲಿಯವರೆಗೂ ಸಿಬಿಐ ತನಿಖೆ ಮುಂದುವರೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಗೆ ಸ್ವಲ್ಪ ದಿನಗಳ ಸಮಾಯವಕಾಶ ದೊರೆತಿದೆ.
ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement