ತುಮಕೂರು : ಭೀಕರ ಅಪಘಾತಕ್ಕೆ ನವದಂಪತಿ ದುರ್ಮರಣ

posted in: ರಾಜ್ಯ | 0

ತುಮಕೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತದಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಸಂಭವಿಸಿದೆ.
ಇಂದು, ಶನಿವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಅರಸಿಕೆರೆ ಮೂಲದ ರಘು(35) ಮತ್ತು ತಿಗಳನಹಳ್ಳಿ ಮೂಲದ ಅನುಷಾ(28 ) ಎಂದು ಗುರುತಿಸಲಾಗಿದೆ.
ರಘು ಮತ್ತು ಅನುಷಾ ದಂಪತಿ ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್’ಗಳಾಗಿದ್ದು ಸಂಬಂಧಿಕರ ಮದುವೆಗೆಂದು ಬಳ್ಳಾರಿ ಕಡೆಗೆ ಹೋಗುತ್ತಿದ್ದಾಗ ಚಿಕ್ಕನಾಯಕನಹಳ್ಳಿಹುಳಿಯಾರ್ ಗೇಟ್ ಬಳಿ ಅಪಘಾತ ಸಂಭವಿಸಿದೆ. ಪರಿಣಾಮ ಕಾರು‌ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ದಂಪತಿ‌ ಅಸುನೀಗಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement