ಬಾರ್ಡರ್-ಗವಾಸ್ಕರ್ ಟ್ರೋಫಿ : ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್, 132 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಹೀನಾಯವಾಗಿ ಸೋಲಿಸಿದ ಭಾರತ, ಸರಣಿಯಲ್ಲಿ 1-0 ಮುನ್ನಡೆ

ನಾಗ್ಪುರ: ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡವು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿತು. ಆಸ್ಟ್ರೇಲಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಏಸ್‌ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಐದು ವಿಕೆಟ್ ಕಬಳಿಸಿ ಆಸ್ಟ್ರೇಲಿತಾ ತಂಡವನ್ನು ಧೂಳೀಪಟ ಮಾಡಿದರು. ರವೀಂದ್ರ ಜಡೇಜಾ ಎರಡು ವಿಕೆಟ್ ಪಡೆದರು. ಆಸ್ಟ್ರೇಲಿಯಾ ಕೇವಲ 91 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ ಇನ್ನಿಂಗ್ಸ್‌ 132 ರನ್‌ಗಳಿಂದ ಹೀನಾಯವಾಗಿ ಸೋತಿತು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅವರ 31ನೇ ಸಲ ಒಂದೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಸಾಧನೆಯಾಗಿದೆ.
ಇದಕ್ಕೂ ಮೊದಲು, ಮೂರನೇ ದಿನದ ಆಟ ಆರಂಭಿಸಿದ ಭಾರತದ ರವೀಂದ್ರ ಜಡೇಜಾ ಬೇಗ ನಿರ್ಮಿಸಿದರೂ ಪಟೇಲ್ 47 ಎಸೆತಗಳಲ್ಲಿ (2×4, 3×6) ಒಂದಿಗೆ 84 (174 ಎಸೆತ; 10×4, 1×6) ರನ್‌ ಗಳಿಸಿದರು. ಒಂಬತ್ತನೇ ವಿಕೆಟ್ ಜೊತೆಯಾಟದಲ್ಲಿ ಶಮಿಯೊಂದಿಗೆ 52 ರನ್‌ಗಳ ವೃತ್ತಿಜೀವನದ ಅತ್ಯುತ್ತಮ ರನ್ ಗಳಿಸಿದರು. ಭಾರತ 400 ರನ್ ಗಳಿಗೆ ಆಲ್‌ಔಟ್‌ ಆಗುವ ಮೂಲಕ 223 ರನ್‌ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿತು.
ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 32.3 ಓವರ್‌ಗಳಲ್ಲಿ ಕೇವಲ 91 ರನ್‌ಗಳಿಗೆ ಆಲೌಟ್ ಆಯಿತು. Bಆರತದ ಪರ ಆರ್‌.ಆಶ್ವಿನ್‌ ಐದು ವಿಕೆಟ್‌ ಪಡೆದರೆ, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ತಲಾ ಎರಡು ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.
ಆಸ್ಟ್ರೇಲಿಯದ ಪರ ಮೊದಲ ಪಂದ್ಯ ಆಡುತ್ತಿರುವ ಆಫ್-ಸ್ಪಿನ್ನರ್ ಟಾಡ್ ಮರ್ಫಿ 7 ವಿಕೆಟ್‌ ಪಡೆದು ಉತ್ತಮ ಸಾಧನೆ ತೋರಿದರು.
ಸಂಕ್ಷಿಪ್ತ ಸ್ಕೋರ್‌ಗಳು: ಆಸ್ಟ್ರೇಲಿಯಾ 1ನೇ ಇನಿಂಗ್ಸ್: 177 ಮತ್ತು 2ನೇ ಇನಿಂಗ್ಸ್: 32.3 ಓವರ್‌ಗಳಲ್ಲಿ 91 ಆಲೌಟ್ (ರವಿಚಂದ್ರನ್ ಅಶ್ವಿನ್ 5/37).
ಭಾರತ ಮೊದಲ ಇನಿಂಗ್ಸ್: 139.3 ಓವರ್‌ಗಳಲ್ಲಿ 400 (ರೋಹಿತ್ ಶರ್ಮಾ 120, ಅಕ್ಷರ್ ಪಟೇಲ್ 84, ರವೀಂದ್ರ ಜಡೇಜಾ 70; ಟಾಡ್ ಮರ್ಫಿ 7/124). ಭಾರತಕ್ಕೆ ಇನಿಂಗ್ಸ್ ಮತ್ತು 132 ರನ್‌ಗಳ ಜಯ.
ಇದು ಭಾರತದ ವಿರುದ್ಧ ಆಸ್ಟ್ರೇಲಿಯಾದ ಎರಡನೇ ಕಡಿಮೆ ಮೊತ್ತವಾಗಿದೆ. ಮುಂದಿನ ಟೆಸ್ಟ್ ಪಂದ್ಯ ಫೆಬ್ರವರಿ 17 ರಂದು ದೆಹಲಿಯಲ್ಲಿ ಆರಂಭವಾಗಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಸೊಳ್ಳೆ ಬತ್ತಿಯಿಂದ ಹೊತ್ತಿಕೊಂಡ ಬೆಂಕಿ: ಒಂದೇ ಕುಟುಂಬದ ಆರು ಮಂದಿ ಸಾವು

 

 

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement