ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬೆಂಗಳೂರಿಗೆ ಭೇಟಿ, ನಾಳೆ ಏರೋ ಇಂಡಿಯಾ 2023ಕ್ಕೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು, ಫೆಬ್ರವರಿ 13ರಂದು ಬೆಳಿಗ್ಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ-2023 ಉದ್ಘಾಟಿಸಲಿರುವ ಪ್ರಧಾನಿ ಇಂದು ಭಾನುವಾರ ಸಂಜೆಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ.
ನರೇಂದ್ರ ಮೋದಿ ಭಾನುವಾರ ರಾಜಸ್ಥಾನ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಕಾರ್ಯಕ್ರಮ ಮುಗಿಸಿ ಸಂಜೆ 7:40ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜಭವನದಲ್ಲಿ ವಾಸ್ತವ್ಯ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ, ಸೋಮವಾರ ಬೆಳಗ್ಗೆ ಬೆಳಗ್ಗೆ 9:30ಕ್ಕೆ ಏರೋ ಇಂಡಿಯಾ 2023 ಉದ್ಘಾಟಿಸಲಿದ್ದಾರೆ.
ಏರೋ ಇಂಡಿಯಾ 2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

ನಿಮ್ಮ ಕಾಮೆಂಟ್ ಬರೆಯಿರಿ

advertisement