ಭೂಕಬಳಿಕೆ ಪ್ರಕರಣದಲ್ಲಿ ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಬಾಟಿ, ತಂದೆಯ ಹೆಸರು

ಹೈದರಾಬಾದ್: ಟಾಲಿವುಡ್ ಖ್ಯಾತ ನಟ ರಾಣಾ ದಗ್ಗುಬಾಟಿ ಮತ್ತು ಅವರ ತಂದೆ, ಖ್ಯಾತ ಚಲನಚಿತ್ರ ನಿರ್ಮಾಪಕ ಡಿ.ಸುರೇಶಬಾಬು ಭೂಕಬಳಿಕೆ ಆರೋಪದ ಪ್ರಕರಣದಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸ್ಥಳೀಯ ಉದ್ಯಮಿ ಪ್ರಮೋದಕುಮಾರ ಅವರು ‘ಬಾಹುಬಲಿ’ ನಟ ಮತ್ತು ಅವರ ತಂದೆಯ ಹೆಸರನ್ನು ದೂರಿನಲ್ಲಿ ಹೆಸರಿಸಿದ್ದು, ತಂದೆ ಮತ್ತು ಮಗ ತನಗೆ ಸೇರಿದ ಭೂಮಿಯನ್ನು ತೆರವು ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ನಗರದ ನಾಂಪಲ್ಲಿ ಮೂರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೂರಿನ ಪ್ರಕಾರ, ಶೇಕ್‌ಪೇಟೆಯಲ್ಲಿರುವ ವಿವಾದಿತ ಜಮೀನನ್ನು ಸುರೇಶಬಾಬು ಎಂಬುವರು 2014ರಲ್ಲಿ ತನಗೆ ಲೀಸ್‌ಗೆ ನೀಡಿದ್ದರು. ಗುತ್ತಿಗೆ ಅವಧಿ ಮುಗಿದ ನಂತರ ಸುರೇಶ್ ಬಾಬು ಅವರಿಗೆ ಆಸ್ತಿಯನ್ನು 18 ಕೋಟಿ ರೂ.ಗೆ ಮಾರಾಟ ಮಾಡಲು ನಿರ್ಧರಿಸಿ ಡೀಲ್ ನಡೆದಿತ್ತು.
ಡೀಲ್‌ಗೆ 5 ಕೋಟಿ ರೂಪಾಯಿ ಪಾವತಿ ಮಾಡಿದ್ದರೂ, ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸುರೇಶಬಾಬು ತಲೆಕೆಡಿಸಿಕೊಂಡಿಲ್ಲ ಎಂದು ಪ್ರಮೋದಕುಮಾರ ಹೇಳಿಕೊಂಡಿದ್ದಾರೆ. ಸಮಸ್ಯೆ ಬಗೆಹರಿಯುವ ಮುನ್ನವೇ ಸುರೇಶ್ ಬಾಬು ತಮ್ಮ ಪುತ್ರ ರಾಣಾ ಹೆಸರಿಗೆ ಆಸ್ತಿಯನ್ನು ವರ್ಗಾಯಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಅಪಹರಣ ಪ್ರಕರಣ: ಗ್ಯಾಂಗ್‌ಸ್ಟರ್‌- ರಾಜಕಾರಣಿ ಅತೀಕ್ ಅಹ್ಮದ್ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement