ಮಹಾರಾಷ್ಟ್ರ ರಾಜ್ಯಪಾಲ ಕೋಶ್ಯಾರಿ ರಾಜೀನಾಮೆ ರಾಷ್ಟ್ರಪತಿಗಳಿಂದ ಅಂಗೀಕಾರ ; 13 ರಾಜ್ಯಪಾಲರ ನೇಮಕ; ಪಟ್ಟಿ ಇಲ್ಲಿದೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ ಮತ್ತು ರಾಜ್ಯದ ಹೊಸ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರನ್ನು ನೇಮಕ ಮಾಡಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಅವರ ಕಾಮೆಂಟ್‌ನ ಇತ್ತೀಚಿನ ವಿವಾದದ ನಂತರ ಕೋಶ್ಯಾರಿ ಅವರ ನಿರ್ಗಮನವಾಗಿದೆ. ಜನವರಿಯಲ್ಲಿ, ಕೊಶ್ಯಾರಿ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು ಹಾಗೂ ಓದಲು ಮತ್ತು ಬರವಣಿಗೆಗೆ ಸಮಯವನ್ನು ವಿನಿಯೋಗಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.
ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಧಾಕೃಷ್ಣನ್ ಮಾಥುರ್ ಅವರ ರಾಜೀನಾಮೆಯನ್ನೂ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.”ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಧಾಕೃಷ್ಣನ್ ಮಾಥುರ್ ಅವರ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ” ಎಂದು ರಾಷ್ಟ್ರಪತಿಗಳ ಸಚಿವಾಲಯದ ಅಧಿಕೃತ ಹೇಳಿಕೆ ತಿಳಿಸಿದೆ.
ರಾಷ್ಟ್ರಪತಿ ಮುರ್ಮು ಅವರು ಬಿಹಾರ, ಅಸ್ಸಾಂ, ಹಿಮಾಚಲ ಪ್ರದೇಶ, ಜಾರ್ಖಂಡ್ ಮತ್ತು ಛತ್ತೀಸ್‌ಗಢ ಸೇರಿದಂತೆ ಹಲವು ರಾಜ್ಯಗಳಿಗೆ ಗವರ್ನರ್ ಹುದ್ದೆಗೆ ಹೊಸ ನೇಮಕಾತಿಗಳನ್ನು ಮಾಡಿದ್ದಾರೆ.
ಹೊಸ ನೇಮಕಾತಿಗಳ ಪಟ್ಟಿ ಇಲ್ಲಿದೆ.
* ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ನೇಮಕ
* ಸಿಕ್ಕಿಂ ರಾಜ್ಯಪಾಲರಾಗಿ ಲಕ್ಷ್ಮಣ ಪ್ರಸಾದ ಆಚಾರ್ಯ ನೇಮಕ
* ಜಾರ್ಖಂಡ್‌ನ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ನೇಮಕ
* ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಶಿವಪ್ರತಾಪ್ ಶುಕ್ಲಾ ನೇಮಕ
* ಅಸ್ಸಾಂನ ರಾಜ್ಯಪಾಲರಾಗಿ ಗುಲಾಬ್ ಚಂದ್ ಕಟಾರಿಯಾ ನೇಮಕ
* ಆಂಧ್ರಪ್ರದೇಶದ ರಾಜ್ಯಪಾಲರಾಗಿ ನ್ಯಾಯಮೂರ್ತಿ (ನಿವೃತ್ತ) ಎಸ್. ಅಬ್ದುಲ್ ನಜೀರ್ ನೇಮಕ
* ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ನೇಮಕ
* ಛತ್ತೀಸ್‌ಗಢದ ರಾಜ್ಯಪಾಲರಾಗಿದ್ದ ಅನುಸೂಯಾ ಉಯಿಕ್ಯೆ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಕ
* ಮಣಿಪುರದ ರಾಜ್ಯಪಾಲರಾಗಿದ್ದ ಲಾ. ಗಣೇಶನ್ ಅವರನ್ನು ನಾಗಾಲ್ಯಾಂಡ್‌ನ ರಾಜ್ಯಪಾಲರನ್ನಾಗಿ ನೇಮಕ
* ಬಿಹಾರದ ರಾಜ್ಯಪಾಲರಾಗಿದ್ದ ಫಗು ಚೌಹಾಣ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಕ
* ಹಿಮಾಚಲ ಪ್ರದೇಶದ ರಾಜ್ಯಪಾಲರರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಕ
* ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ರಮೇಶ್ ಬೈಸ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ
* ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಬ್ರಿಗ್. (ಡಾ.) ಬಿ.ಡಿ ಮಿಶ್ರಾ (ನಿವೃತ್ತ) ಅವರನ್ನು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ
ಮೇಲಿನ ನೇಮಕಾತಿಗಳು ಅವರು ತಮ್ಮ ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement