ಹುಲಿ ದಾಳಿಗೆ ಹದಿಹರೆಯದ ಕಾರ್ಮಿಕ ಸಾವು

ಮಡಿಕೇರಿ: ನರಭಕ್ಷಕ ಹುಲಿ ದಾಳಿಗೆ ಸಿಲುಕಿ ಹದಿಹರೆಯದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಕೊಡಗು-ಕೇರಳ ಗಡಿಭಾಗವಾದ ಚೂರಿಕಾಡು ಬಳಿ ನಡೆದ ವರದಿಯಾಗಿದೆ.
ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಕಾರ್ಮಿಕ ಚೇತನ್ (18) ಹುಲಿ ದಾಳಿಗೆ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದ ವೇಳೆ ಈತ ಕಾಫಲಿ ಪ್ಲಾಂಟ್‌ನಲ್ಲಿ ತನ್ನ ದೈನಂದಿನ ಕೆಲಸದಲ್ಲಿ ನಿರತನಾಗಿದ್ದಾಗ ತೋಟದಲ್ಲಿದ್ದ ಹುಲಿ ಯುವಕನ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ.
ಕಾಫಿ ತೋಟದ ಮಾಲೀಕರು ಸಂಬಂಧಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ ಪ್ರದೇಶದ ಅಂಚಿನಲ್ಲಿ ಈ ಘಟನೆ ನಡೆದಿದ್ದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ಇಲಾಖೆಯ ಎಸಿಎಫ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement