ಲಿಸ್ಬನ್(ಪೋರ್ಚುಗಲ್): ಪೋರ್ಚುಗಲ್‌ನ ಕ್ಯಾಥೋಲಿಕ್ ಪಾದ್ರಿಗಳು 1950ರಿಂದ ಸುಮಾರು 5,000 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ಎಸಗಿದ್ದಾರೆ ಎಂದು ನೂರಾರು ಸಂತ್ರಸ್ತರ ಬಗ್ಗೆ ತನಿಖೆ ನಡೆಸಿದ ನಂತರ ಸ್ವತಂತ್ರ ಆಯೋಗ ಸೋಮವಾರ ಹೇಳಿದೆ.
ಸ್ವತಂತ್ರ ಆಯೋಗ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದೆ. ಚರ್ಚ್‌ಗಳ ಪಾದ್ರಿಗಳ ಲೈಂಗಿಕ ದೌರ್ಜನ್ಯದ ಬಗ್ಗೆ ಪೋರ್ಚುಗಲ್‌ನ ಕ್ಯಾಥೋಲಿಕ್ ಚರ್ಚ್ ಒಕ್ಕೂಟವು ಸ್ವತಂತ್ರ ತನಿಖಾ ಆಯೋಗವನ್ನು ನೇಮಿಸಿತ್ತು. ಈ ಸಂಬಂಧ ಆಯೋಗವು ತನಿಖಾ ವರದಿಯನ್ನು ಬಹಿರಂಗಪಡಿಸಿದೆ.
ಆಯೋಗವು ಕಳೆದ ಒಂದು ವರ್ಷದಲ್ಲಿ 500 ಸಂತ್ರಸ್ತೆಯರನ್ನು ಪತ್ತೆ ಹಚ್ಚಿ ಅವರ ಹೇಳಿಕೆಗಳನ್ನು ದಾಖಲಿಸಿದೆ. ಆಯೋಗದ ತನಿಖೆ ಪ್ರಕಾರ ಕ್ಯಾಥೋಲಿಕ್ ಚರ್ಚ್ ಪಾದ್ರಿಗಳು ಪೋರ್ಚುಗಲ್‌ನಲ್ಲಿ 1950 ರಿಂದ ಈವರೆಗೆ ಸುಮಾರು 5000 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜುನ್ಯ ನಡೆಸಿರುವುದು ಬೆಳಕಿಗೆ ಬಂದಿದೆ ಎಂದು ಅದು ಹೇಳಿದೆ.
ಕ್ಯಾಥೋಲಿಕ್ ಚರ್ಚ್‌ಗಳ ಪ್ರಾಬಲ್ಯ ಇರುವ ಪೋರ್ಚುಗಲ್‌ನಲ್ಲಿ ಸಂತ್ರಸ್ತರು ಆರಂಭದಲ್ಲಿ ಹೇಳಿಕೆ ದಾಖಲಿಸಲು ಮುಂದೆ ಬಂದರಲಿಲ್ಲ. ಬಹುತೇಕ ಪ್ರಕರಣಗಳಲ್ಲಿ ಪೊಲೀಸ್ ದೂರು ದಾಖಲಾಗಿರಲಿಲ್ಲ ಎಂದು ಆಯೋಗ ಹೇಳಿದೆ.
ಮಕ್ಕಳ ಮಾನಸಿಕ ತಜ್ಞರೂ ಆಗಿರುವ ಸ್ವತಂತ್ರ ತನಿಖಾ ಆಯೋಗದ ಅಧ್ಯಕ್ಷ ಪೆಡ್ರೊ ಸ್ಟ್ರೆಚ್ಟ್ ಅವರು, ಮಕ್ಕಳ ಮೇಲಿನ ಲೈಂಗಿಕ ಶೋಷಣೆ ನಿರ್ಲಕ್ಷಿಸುವ ಆಘಾತವು ಪೂರ್ಚುಗಲ್‌ಗೆ ಈಗ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.
ಕ್ಯಾಥೋಲಿಕ್ ಚರ್ಚ್‌ಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆಯೂ ಕ್ಯಾಥೋಲಿಕ್ ಚರ್ಚ್‌ಗಳ ಪ್ರಭಾವ ಜಾಸ್ತಿಯಿರುವ ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ನಡೆದಿದೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಅವರು ತಿಳಿಸಿದ್ದಾರೆ.
ಸ್ವತಂತ್ರ ತನಿಖಾ ಆಯೋಗ ನೀಡಿರುವ ಈ ವರದಿಯನ್ನು ನಿಭಾಯಿಸುವುದು ಜಗತ್ತಿನ ಎಲ್ಲ ಕ್ಯಾಥೋಲಿಕ್ ಚರ್ಚ್‌ಗಳ ಮುಖ್ಯ ಪಾದ್ರಿಯಾಗಿರುವ ಪೋಪ್ ಫ್ರಾನ್ಸಿಸ್ ಅವರನ್ನು ಒತ್ತಡಕ್ಕೆ ಸಿಲುಕಿಸಿದೆ ಎಂದು ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ