ಲಿವ್-ಇನ್ ಪಾರ್ಟ್ನರ್‌ ಕೊರಳಿಗೆ ಡಾಟಾ ಕೇಬಲ್‌ ಬಿಗಿದು ಕೊಲೆ ಮಾಡಿ ದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ದೆಹಲಿ ವ್ಯಕ್ತಿ

ನವದೆಹಲಿ: ಮಂಗಳವಾರ ರಸ್ತೆ ಬದಿಯ ರೆಸ್ಟೋರೆಂಟ್‌ನ ಫ್ರಿಡ್ಜ್‌ನಲ್ಲಿ ಶವ ಪತ್ತೆಯಾದ ದೆಹಲಿ ಮಹಿಳೆಯನ್ನು ಆಕೆಯ ಲೈವ್-ಇನ್ ಬಾಯ್‌ಫ್ರೆಂಡ್ ಕೊಲೆ ಮಾಡಿದ್ದು, ಡಾಟಾ ಕೇಬಲ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
24 ವರ್ಷದ ಸಾಹಿಲ್ ಗೆಹ್ಲೋಟ್ ತನ್ನ ಗೆಳತಿಯನ್ನು ಕೊಲೆ ಮಾಡಿ ಅದನ್ನು ಮರೆಮಾಡಲು ಯತ್ನಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಜಗಳದ ನಂತರ 23 ವರ್ಷದ ನಿಕ್ಕಿ ಯಾದವ್‌ ಎಂಬವಳನ್ನು ಕೊಂದು ಆಕೆಯ ಶವವನ್ನು ತನ್ನ ಕುಟುಂಬದ ಒಡೆತನದ ಧಾಬಾದಲ್ಲಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಎಂದು ಹೇಳಲಾಗಿದೆ.
ನಿಕ್ಕಿ ಯಾದವ್ ಹತ್ಯೆಗೀಡಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಆತನನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. 24 ವರ್ಷದ ಫಾರ್ಮಾ ಪದವೀಧರನಾದ ಸಾಹಿಲ್ ಕೊಲೆ ಮಾಡಿದ ಮಾರನೇ ದಿನವೇ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿದ್ದ…!
ನಿಕ್ಕಿ ಯಾದವ್ ನಾಪತ್ತೆಯಾದಾಗ, ನೆರೆಹೊರೆಯವರು ಆಕೆ ಕಾಣೆಯಾಗಿದ್ದಾರೆ ಎಂದು ವರದಿ ಮಾಡಿದ್ದರು; ಹರಿಯಾಣದ ಜಜ್ಜರ್‌ನಲ್ಲಿರುವ ಆಕೆಯ ಕುಟುಂಬಕ್ಕೆ ಅವಳು ಎಲ್ಲಿದ್ದಾಳೆಂದು ತಿಳಿದಿರಲಿಲ್ಲ.
ನಿಕ್ಕಿ ಮತ್ತು ಸಾಹಿಲ್ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಾಹಿಲ್ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದು ಆಕೆಗೆ ತಿಳಿದಿರಲಿಲ್ಲ.
ಕಳೆದ ವರ್ಷ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೂ ಈ ಘಟನೆಗೂ ವಿಲಕ್ಷಣ ಹೋಲಿಕೆ ಇದೆ. ಶ್ರದ್ಧಾಳನ್ನು ಆಕೆಯ ಲಿವ್-ಇನ್ ಪಾಲುದಾರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆಕೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಅರಣ್ಯ ಪ್ರದೇಶದಲ್ಲಿ ವಿಲೇವಾರಿ ಮಾಡುವ ಮೊದಲು 300 ಲೀಟರ್ ಫ್ರಿಡ್ಜ್‌ನಲ್ಲಿ ಸಂಗ್ರಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ರಾಹುಲ್ ಗಾಂಧಿ ಅನರ್ಹತೆಯ ಗದ್ದಲದ ನಡುವೆ, ಲೋಕಸಭೆ ಸದಸ್ಯತ್ವ ಮರಳಿ ಪಡೆದ ಈ ಸಂಸದ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement