ರಾಜಕೀಯ ಸೇರುವ ಬಗ್ಗೆ ಮೌನ ಮುರಿದ ನಟ ಕಿಚ್ಚ ಸುದೀಪ

ಬೆಂಗಳೂರು : ರಾಜಕೀಯ ಪ್ರವೇಶ ಕುರಿತು ಕೊನೆಗೂ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ ಮೌನ ಮುರಿದಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ನಟ ಸುದೀಪ ಅವರನ್ನ ಭೇಟಿಯಾಗಿದ್ದು ಸಾಕಷ್ಟು ಸುದ್ದಿಯಾಗಿ ನಟ ಸುದೀಪ ರಾಜಕೀಯ ಪ್ರವೇಶಿಸುತ್ತಾರೆಯೇ ಎಂಬ ಕುತೂಹಲ ಉಂಟಾಗಿತ್ತು.
ಈಗ ಈ ಕುರಿತು ಪ್ರತಿಕ್ರಿಯಿಸಿರುವ ನಟ ಸುದೀಪ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಆಹ್ವಾನ ಬಂದಿದ್ದಾಗಿ ಹೇಳಿದ್ದಾರೆ. ಮನೆಗೆ ರಾಜಕೀಯ ನಾಯಕರು ಬಂದಿದ್ದರು. ಆದರೆ ನಾನು ರಾಜಕೀಯಕ್ಕೆ ಪ್ರವೇಶ ಮಾಡುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಸಚಿವ ಸುಧಾಕರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ನನಗೆ ಬಾಂಧವ್ಯವಿದೆ. ಎಲ್ಲಾ ಪಕ್ಷಗಳಲ್ಲಿಯೂ ನನಗೆ ಸ್ನೇಹಿತರು ಇದ್ದಾರೆ. ಅಭಿಮಾನಿಗಳು ಏನು ಬಯಸುತ್ತಾರೆ ಎಂಬುದನ್ನೂ ನೋಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಮೊದಲನೆಯದಾಗಿ ನಾನೊಬ್ಬ ಕಲಾವಿದ, ನನಗೆ ಎರಡೂ ಕಡೆ ಆಪ್ತರು ಇರುವಾಗ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ. ಅಲ್ಲದೆ, ನನಗೆ ಅಭಿಮಾನಿಗಳ ಪಕ್ಷ ಎಂಬುದೊಂದಿದೆ. ನಾನುಅವರ ಇಂಗಿತವನ್ನೂ ಗಮನಿಸಬೇಕಾಗುತ್ತದೆ ಎಂದು ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement