ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆಯಬೇಕು ಎಂದ ಸಚಿವ ಅಶ್ವತ್ಥ ನಾರಾಯಣ: ಹೊಡೆಯಲು ನೀವೇ ಕೋವಿ ಹಿಡಿದು ಬನ್ನಿ ಎಂದ ಸಿದ್ದರಾಮಯ್ಯ

posted in: ರಾಜ್ಯ | 0

ಮಂಡ್ಯ/ಬೆಂಗಳೂರು: ಬಿಜೆಪಿ ನಾಯಕ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿ ಈಗ ಟೀಕೆಗೆ ಒಳಗಾಗಿದ್ದಾರೆ.
ಮಂಡ್ಯದಲ್ಲಿ ಮತ ಬೇಟೆ ಆರಂಭಿಸಿರುವ ಬಿಜೆಪಿ ಸಚಿವ ಅಶ್ವತ್ಥ ನಾರಾಯಣ ‘ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು’ ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದಾರೆ.
ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಇಲ್ಲದಿದ್ದರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳುಹಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ‘ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದು ಹಾಕಬೇಕು ಎಂದು ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ನೀವು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ’ ಎಂದು ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ. ಸಿ.ಎನ್‌. ಅಶ್ವತ್ಥನಾರಾಯಣ್‌ಗೆ ನೀಡಿರುವ ಹೇಳಿಕೆಗೆ ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ಒಬ್ಬ ಜವಾಬ್ದಾರಿಯುತ ಸಚಿವರಾಗಿ ಈ ರೀತಿ ಬಹಿರಂಗವಾಗಿ ಹೊಡೆದುಹಾಕಬೇಕು ಎಂದು ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದ್ದಾರೆ ಎಂದೇ ಲೆಕ್ಕ ಎಂದು ಟ್ವೀಟ್‌ ಮಾಡಿದ್ದಾರೆ.
ಅಲ್ಲದೆ, ಅಶ್ವತ್ಥನಾರಾಯಣ್‌ ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ತಿಳಿಯಲು ಬಯಸುತ್ತೇನೆ. ಮೌನವು ಸಮ್ಮತಿಯ ಲಕ್ಷಣವೇ? ಎಂದು ಪ್ರಶ್ನಿಸಿದ್ದಾರೆ. ನನ್ನ ಹತ್ಯೆಗೆ ಅಶ್ವತ್ಥನಾರಾಯಣ ನೀಡಿದ ಕರೆಯಿಂದ ನನಗೆ ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೇ ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.

 

ಇಂದಿನ ಪ್ರಮುಖ ಸುದ್ದಿ :-   ಅನ್ಲಿಮಿಟೆಡ್ ಕ್ರಿಕೆಟ್ ಲೈವ್‌ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳಿಗೆ ಜಿಯೋದಿಂದ ಅನ್ಲಿಮಿಟೆಡ್ ಕ್ರಿಕೆಟ್ ಪ್ಲಾನ್

ಹೇಳಿಕೆಗೆ ಸಚಿವ ಅಶ್ವತ್ಥನಾರಾಯಣ ವಿಷಾದ…

ಹೇಳಿಕೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ನೀಡಿದ್ದ ಹೇಳಿಕೆಗೆ ಇಂದು, ಗುರುವಾರ ಸಚಿವ ಅಶ್ವಥ್ ನಾರಾಯಣ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಮಂಡ್ಯದಲ್ಲಿ ಟಿಪ್ಪು-ಸಿದ್ದರಾಮಯ್ಯ ಹೋಲಿಸಿ ತಾನು ಮಾತನಾಡಿರುವುದು, ಸಾಂದರ್ಭಿಕ ಪ್ರಸ್ತಾಪವೇ ಹೊರತು ಇದರಲ್ಲಿ ಯಾವುದೇ ದುರುದ್ದೇಶದಿಂದ ಹೇಳಿದ್ದಲ್ಲ ಎಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ ಟಿಪ್ಪು ಹಾಗೂ ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು ಎಂದು ಹೇಳಿದ್ದಾರೆ.

ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ. ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ. ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕದ 95% ಶಾಸಕರು ಕೋಟ್ಯಧಿಪತಿಗಳು; 35% ಶಾಸಕರ ಮೇಲೆ ಕ್ರಿಮಿನಲ್ ಆರೋಪ : ಎಡಿಆರ್ ವರದಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement