ಮಂಗಳೂರು: ಯಕ್ಷಗಾನದ ತೆಂಕುತಿಟ್ಟಿನ ಮೇರು ಭಾಗವತ ಬಲಿಪ ನಾರಾಯಣ ಭಾಗವತ ಅವರು ಇಂದು, ಗುರುವಾರ ನಿಧನರಾಗಿದ್ದಾರೆ. ಅವರಿಗೆ ೮೫ ವರ್ಷ ವಯಸ್ಸಾಗಿತ್ತು.
ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಅವರು ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು ೧೩ನೇ ವರ್ಷದಲ್ಲಿ ರಂಗ ಪ್ರವೇಶ ಮಾಡಿದ್ದರು. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು. ತೆಂಕುತಿಟ್ಟಿನಲ್ಲಿ ಇವರು ಹಾಡಗಾರಿಕೆ ಶೈಲಿ ಬಲಿಪ ಶೈಲಿ ಎಂದೇ ಪ್ರಖ್ಯಾತವಾಗಿದೆ. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಬಹಳ ವರ್ಷಗಳ ವರೆಗೆ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ೩೦ ಪ್ರಕಟಿತ ಮತ್ತು ೧೫ ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನ ಕಟ್ಟಿಸಿದ್ದಾರೆ. ಬಲಿಪ ನಾರಾಯಣ ಭಾಗವತರು ಐದು ದಿನದ ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದು ಯಕ್ಷಗಾನದ ಇತಿಹಾಸದಲ್ಲೇ ಇದೊಂದು ಮಹತ್ವದ ಕೃತಿಯಾಗಿದೆ.
ಏರು ಸ್ವರದ ಭಾಗವತಿಕೆಯ ಮೂಲಕ ಬಹಳ ಪ್ರಖ್ಯಾತಿಯನ್ನು ಹೊಂದಿದ್ದ ಇವರು ದೇವಿ ಮಹಾತ್ಮೆ, ಕಟೀಲು ಕ್ಷೇತ್ರ ಮಹಾತ್ಮೆ ಅನೇಕ ಯಕ್ಷಗಾನ ಪ್ರಸಂಗಗಳ ಹಾಡುಗಾರಿಕೆಯಲ್ಲಿ ಪ್ರಸಿದ್ಧಿಯನ್ನು ಪಡೆದವರು.
ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸನ್ಮಾನಗಳು ಇವರಿಗೆ ಸಂದಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (೨೦೧೦),
ಸಾಮಗ ಪ್ರಶಸ್ತಿ ೨೦೧೨, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’ (೨೦೦೩), 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ(೨೦೦೩), ಮುಂಬಯಿ `ಅಗರಿ ಪ್ರಶಸ್ತಿ’ (೨೦೦೨), ಶೇಣಿ ಪ್ರಶಸ್ತಿ (೨೦೦೨), ಕವಿ ಮುದ್ದಣ ಪುರಸ್ಕಾರ (೨೦೦೩), ಪಾರ್ತಿಸುಬ್ಬ ಪ್ರಶಸ್ತಿ,
ಆಳ್ವಾಸ್ ನುಡಿಸಿರಿ ಪ್ರಶಸ್ತಿ[ ಹೀಗೆ ಹತ್ತು ಹಲವಾರು ಪ್ರಶಸ್ತಿಗಳು ಸಂದಿವೆ.
ಬಲಿಪರ ನಿಧನ ಯಕ್ಷಲೋಕಕ್ಕೆ ತುಂಬಲಾರದ ನಷ್ಟ. ಬಲಿಪ ಅವರ ನಿಧನಕ್ಕೆ ಗಣ್ಯರು, ಜನಪ್ರತಿನಿಧಿಗಳು, ಹಾಗೂ ಅವರ ಸಾವಿರಾರು ಅಭಿಮಾನಿಗಳು, ಕಲಾವಿದರು ತೀವ್ರ ಸಂತಾಪ ಸೂಚಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ