ಮುಂಬೈ: , ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರೊಂದಿಗೆ ಎರಡನೇ ಬಾರಿಗೆ ಸೆಲ್ಫಿ ತೆಗೆದುಕೊಳ್ಳಲು ಬ್ಯಾಟ್ಸ್‌ಮನ್ ನಿರಾಕರಿಸಿದ ನಂತರ ಅವರ ಮೇಲೆ ಹಲ್ಲೆ ನಡೆಸಿದ ಎಂಟು ಆರೋಪಿಗಳ ಪೈ ಒಬ್ಬ ಮಹಿಳೆಯನ್ನು ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯನ್ನು ಸಾಮಾಜಿಕ ಮಾಧ್ಯಮದ ಪ್ರಭಾವಿ ಸಪ್ನಾ ಗಿಲ್ ಎಂದು ಗುರುತಿಸಲಾಗಿದೆ ಎಂದು ಓಶಿವಾರಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇನ್ನೂ ಕೆಲವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅನಿಲ್ ಪರಸ್ಕರ್ ತಿಳಿಸಿದ್ದಾರೆ.
ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಸಭೆ, ಸುಲಿಗೆ ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ದೂರುದಾರರ ಕಾರನ್ನು ಹಾನಿಗೊಳಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅನಿಲ್ ಪರಸ್ಕರ್ ಹೇಳಿದ್ದಾರೆ. ಆರೋಪಿಗಳು ದಾಳಿ ನಡೆಸಿದಾಗ ಶಾ ಕಾರಿನಲ್ಲಿದ್ದರು. ಬಳಿಕ ಮತ್ತೊಂದು ಕಾರಿನಲ್ಲಿ ಶಾ ಅವರನ್ನು ಕಳುಹಿಸಲಾಗಿತ್ತು. ಶಾ ಅವರ ಸ್ನೇಹಿತನ ವಾಹನವನ್ನೂ ಆರೋಪಿಗಳು ಹಿಂಬಾಲಿಸಿದ್ದಾರೆ.
ದೂರುದಾರರ ಪ್ರಕಾರ, ಶಾ ತನ್ನ ಸ್ನೇಹಿತರೊಂದಿಗೆ ಸಾಂತಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದಾಗ ಕೆಲವು ಅಪರಿಚಿತರು ಅವರ ಟೇಬಲ್ ಬಳಿ ಬಂದು ಸೆಲ್ಫಿಗೆ ಒತ್ತಾಯಿಸಿದರು.
ಕ್ರಿಕೆಟಿಗನು ಸೆಲ್ಫಿ ತೆಗೆದೊಕೊಳ್ಳಲು ನಿರಾಕರಿಸಿದರು. ಆದರೆ ಸ್ವಲ್ಪ ಸಮಯದ ನಂತರ ಅದೇ ಗುಂಪು ಹಿಂತಿರುಗಿತು, ಮತ್ತೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿತು. ಶಾ ನಿರಾಕರಿಸಿದರು, ನಾನು ಸ್ನೇಹಿತರೊಂದಿಗೆ ಆಹಾರ ಸೇವಿಸಲು ಬಂದಿದ್ದೇನೆ. ಇದಕ್ಕೆ ತೊಂದರೆ ಮಾಡಬೇಡಿ ಎಂದು ಹೇಳಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಅವರು ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದಾಗ, ಪೃಥ್ವಿಯ ಸ್ನೇಹಿತ ಹೋಟೆಲ್ ಮ್ಯಾನೇಜರ್‌ಗೆ ಕರೆ ಮಾಡಿ ಅವರ ಬಗ್ಗೆ ದೂರು ನೀಡಿದ್ದಾರೆ. ಇದಾದ ಬಳಿಕ ಹೋಟೆಲ್ ಮ್ಯಾನೇಜರ್ ಆರೋಪಿಗಳನ್ನು ಹೋಟೆಲ್‌ನಿಂದ ಹೊರಹೋಗುವಂತೆ ಹೇಳಿದ್ದಾರೆ.
ರಾತ್ರಿ ಊಟ ಮುಗಿಸಿ ಹೋಟೆಲ್‌ನಿಂದ ಹೊರ ಬಂದ ಶಾ ಮತ್ತು ಆತನ ಸ್ನೇಹಿತ ಹೊಟೇಲ್‌ನ ಹೊರಗೆ ಕಾದು ನಿಂತಿದ್ದ ಆರೋಪಿಗಳು ಬೇಸ್‌ಬಾಲ್ ಬ್ಯಾಟ್‌ಗಳಿಂದ ಹಲ್ಲೆ ನಡೆಸಿ ಕಾರಿನ ಮುಂಭಾಗ ಮತ್ತು ಹಿಂಬದಿಯ ಗಾಜುಗಳನ್ನು ಒಡೆದಿದ್ದಾರೆ. ಜೋಗೇಶ್ವರಿಯ ಲೋಟಸ್ ಪೆಟ್ರೋಲ್ ಪಂಪ್ ಬಳಿ ಶಾ ಅವರ ಸ್ನೇಹಿತನ ಕಾರನ್ನು ಸಹ ನಿಲ್ಲಿಸಲಾಗಿತ್ತು. ಅಲ್ಲಿಯೂ ಮಹಿಳೆಯೊಬ್ಬರು ಕಾರಿನ ಬಳಿ ಬಂದು ನಿಂದಿಸಲು ಪ್ರಾರಂಭಿಸಿದರು.
ಮಹಿಳೆ 50,000 ರೂ.ಗೆ ಬೇಡಿಕೆಯಿಟ್ಟಿದ್ದಾಳೆ, ಇಲ್ಲದಿದ್ದರೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ದೂರುದಾರರು ಹೇಳಿದ್ದಾರೆ. ಈ ಘಟನೆಯ ನಂತರ ದೂರುದಾರರು ಓಶಿವಾರ ಪೊಲೀಸ್ ಠಾಣೆಗೆ ಆಗಮಿಸಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ