ಕೊಪ್ಪಳ : ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕೂಕುನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.
ಇಬ್ಬರು ಪುರುಷರು ಇಬ್ಬರು ಮಹಿಳೆಯರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೃತರು ತೆಲಂಗಾಣ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.
ಕೊಪ್ಪಳ ಮಾರ್ಗವಾಗಿ ಗದಗ ಕಡೆಗೆ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಗೋಡೆಗೆ ಗುದ್ದಿದೆ ಎನ್ನಲಾಗುತ್ತಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಥಳಕ್ಕೆ ಕೂಕನೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರು ಕೊಪ್ಪಳ ಜಿಲ್ಲೆಯಿಂದ ಗದಗ ಮಾರ್ಗವಾಗಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ