ಕ್ರಿಕೆಟ್ ಪಂದ್ಯದ ವೇಳೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಬಾಲ್‌ ಬಡಿದು ಬಿಜೆಪಿ ಕಾರ್ಯಕರ್ತನಿಗೆ ಗಾಯ

ಭೋಪಾಲ್: ರೇವಾ ಜಿಲ್ಲೆಯ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣವನ್ನು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉದ್ಘಾಟನೆ ವೇಳೆ ಹೊಡೆದ ಚೆಂಡು ತಗುಲಿ ಬಿಜೆಪಿ (BJP) ಕಾರ್ಯಕರ್ತ ಗಾಯ ಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಮಧ್ಯಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಆಟದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಬ್ಯಾಟ್‌ ಮಾಡುವಾಗ ಹೊಡೆದ ಚಂಡು ಬಿಜೆಪಿ ಪದಾಧಿಕಾರಿಯ ತಲೆಗೆ ಬಡಿದಿದೆ.
ಸಚಿವರು ಹೊಡೆದ ಚೆಂಡನ್ನು ವಿಕಾಸ್ ಮಿಶ್ರಾ ಎಂಬವರು ಕ್ಯಾಚ್ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಚೆಂಡು ತಪ್ಪಿ ಅವರ ಹಣೆಗೆ ಬಡಿದಿದೆ. ಪರಿಣಾಮವಾಗಿ ಆಳವಾದ ಕಟ್ ಆಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಹಲವಾರು ಹೊಲಿಗೆಗಳನ್ನು ಹಾಕಲಾಯಿತು ಮತ್ತು ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಗಳು ತಿಳಿಸಿವೆ.
ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಬಿಜೆಪಿ ಕಾರ್ಯಾಧ್ಯಕ್ಷ ಧೀರಜ್ ದ್ವಿವೇದಿ ತಿಳಿಸಿದ್ದಾರೆ. ಕ್ರೀಡಾಂಗಣ ಉದ್ಘಾಟನೆಗೊಂಡ ನಂತರ ಸೌಹಾರ್ದ ಪಂದ್ಯವನ್ನು ಆಡಲಾಯಿತು. ವಿಕಾಸ್ ಗಾಯಗೊಂಡ ತಕ್ಷಣ ಆಟವನ್ನು ನಿಲ್ಲಿಸಲಾಯಿತು ಮತ್ತು ಅವರನ್ನು ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು.
ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಆಸ್ಪತ್ರೆಗೆ ಭೇಟಿ ನೀಡಿದರು.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement