ಕರ್ನಾಟಕ ಬಜೆಟ್‌ 2023-24: ಪದವಿ ವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಶುಲ್ಕ ಇಲ್ಲ, ಸಿಎಂ ವಿದ್ಯಾಶಕ್ತಿ ಯೋಜನೆ ಘೋಷಣೆ; `ಮಕ್ಕಳ ಬಸ್ಸು’ ಎಂಬ ಯೋಜನೆ ಆರಂಭ

ಬೆಂಗಳೂರು: ಶಿಕ್ಷಣ ಇಲಾಖೆ ಹೆಚ್ಚಿನ ಆದ್ಯತೆ ನೀಡಿರುವ ರಾಜ್ಯ ಸರ್ಕಾರವು ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯನ್ನು ಪ್ರಕಟಿಸಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಹಂತದವರೆಗೂ ಎಲ್ಲ ಮಕ್ಕಳಿಗೂ ಸಂಪೂರ್ಣ ಶುಲ್ಕ ವಿನಾಯ್ತಿ ನೀಡಲಾಗಿದೆ. ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದೆ.
`ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
*ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು `ಮಕ್ಕಳ ಬಸ್ಸು’ ಎಂಬ ಯೋಜನೆ ಪ್ರಾರಂಭಿಸಲಾಗುತ್ತದೆ, ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
* ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಬಿಸಿಯೂಟ ಸಹಾಯಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರು, ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಾಪಂ ಸದಸ್ಯರುಗಳ ಗೌರವಧನ ಹೆಚ್ಚಳ.
* ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನ 1,000 ರೂ.ಗಳಂತೆ ಹೆಚ್ಚಿಸಲು ನಿರ್ಧಾರ.
*ವಿದ್ಯಾ ನಿಧಿ ಯೋಜನೆ ವಿಸ್ತರಣೆ: ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತ ನಿಗದಿಪಡಿಸಲಾಗಿದೆ ಹಾಗೂ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಣೆ
*ವಿವೇಕ ಯೋಜನೆಯಡಿಯಲ್ಲಿ 7,601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ಸ್ಥಾಪನೆ
*ಪಿಎಂ ಶ್ರೀಗೆ 100 ಕೋಟಿ ರೂಪಾಯಿ
ಉತ್ತಮ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು ಹೊಸ ಕೇಂದ್ರ ಪುರಸ್ಕೃತ ಯೋಜನೆಯಾದ ಪಿಎಂಶ್ರೀ (PM SHRI)ಯೋಜನಗೆ 100 ಕೋಟಿ ರೂ.
*ನರೇಗಾದಡಿ ಶಾಲಾ ಕಾಲೇಜು ಶೌಚಾಲಯ ಅಭಿವೃದ್ಧಿ: ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ರೂ. ಅಂದಾಜು ವೆಚ್ಚದಲ್ಲಿ 7,750 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಬೇಡಿಕೆಯನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಯೋಜನೆಯಡಿ ಮಾರ್ಚ್ 2023ರ ಅಂತ್ಯದಲ್ಲಿ 2,169 ಶೌಚಾಲಯಗಳ ಪೂರ್ಣಗೊಳಿಸಲು ನಿಗದಿ, 5,581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸುವ ಗುರಿ., ಇದಕ್ಕೆ 80 ಕೋಟಿ ರೂ. ಹಂಚಿಕೆ.
*ಶಾಲಾ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು : ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಪ್ರಸಕ್ತ ವರ್ಷದಲ್ಲಿ 1,230 ಕೊಠಡಿಗಳ ನಿರ್ಮಾಣ, ಹಳೆಯ ಮತ್ತು ಅಧಿಕ ಮಳೆಯಿಂದಾಗಿ ಹಾನಿಯಾಗಿರುವ 2,777 ಕೊಠಡಿಗಳ ದುರಸ್ತಿ. ಅಧಿಕ ದಾಖಲಾತಿಯಿರುವ ಶಾಲಾ-ಕಾಲೇಜುಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ. 60 ತಾಲೂಕುಗಳಲ್ಲಿ ತಲಾ ಒಂದು ಪದವಿ ಪೂರ್ವ ಕಾಲೇಜು ಗುರುತಿಸಿ, ಆದರ್ಶ ಪದವಿ ಪೂರ್ವ ಕಾಲೇಜುಗಳ ಅಭಿವೃದ್ಧಿಗೆ ಕ್ರಮ.
73 ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ‘ಸೃಷ್ಟಿ’ ಟಿಂಕರಿಂಗ್ ಪ್ರಯೋಗಾಲಯಗಳ ಸ್ಥಾಪನೆ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೊಂದಿಲ್ಲದ 23 ತಾಲೂಕುಗಳಲ್ಲಿ ಹೊಸದಾಗಿ ಶಾಲೆಗಳನ್ನು ನಿರ್ಮಿಸಲು ಕ್ರಮ. ಅಲ್ಲದೆ, ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement