ಕರ್ನಾಟಕ ಬಜೆಟ್‌ 2023-24 : ಮಹಿಳೆಯರಿಗೆ ಬಂಪರ್‌ ಕೊಡುಗೆ , ಬಜೆಟ್‌ ಹೈಲೈಟ್ಸ್‌…

ಬೆಂಗಳೂರು: ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಮಹಿಳಾ ಆಯವ್ಯಯದಲ್ಲಿ ಒಟ್ಟಾರೆ 46,278 ಕೋಟಿ ರೂ. ಒದಗಿಸಲಾಗಿದೆ.
ಮಹಿಳೆಯರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರ ಈ ಬಾರಿ ಆಯವ್ಯಯದಲ್ಲಿ ಭಾರೀ ಕೊಡುಗೆ ನೀಡಿದ್ದಾರೆ. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ.
ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ ಪಾರಂಭಿಸಲು ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ‘ವಿದ್ಯಾವಾಹಿನಿ’ ಎಂಬ ಯೋಜನೆಯಡಿಯಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ನಿರ್ಧರಿಸಲಾಗಿದೆ.
ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾಯ್ದೆ 2013ರ ಅನುಷ್ಠಾನದ 10 ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಹೊಸ ಯೋಜನೆಗಳೇನು? ಹೊಸ ಘೋಷಣೆಗಳೇನು?
ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ
ಪದವಿ ವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ
‘ಬದುಕುವ ದಾರಿ’ ಯೋಜನೆಯಡಿ ಯುವಕರಿಗೆ 3 ತಿಂಗಳು ಐಟಿಐ ತರಬೇತಿ
ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ’ ಯೋಜನೆಯಡಿ ತಲಾ 2 ಸಾವಿರ ರೂ. ಸ್ಟೈಪಂಡ್‌
‘ವಿದ್ಯಾವಾಹಿನಿ’ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
‘ಗೃಹಿಣಿ ಶಕ್ತಿ’ ಯೋಜನೆ ಜಾರಿ: 46,278 ಕೋಟಿ ರೂ. ಅನುದಾನ
‘ನಮ್ಮ ನೆಲೆ’ ಯೋಜನೆಯಡಿ ಆರ್ಥಿಕ ದುರ್ಬಲ ವರ್ಗದವರಿಗೆ ನಿವೇಶನ
‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ ಅಡಿ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣ ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಆಯ್ಕೆಯಾದರೆ ಸರ್ಕಾರದಿಂದ ಸಂಪೂರ್ಣ ಶುಲ್ಕ ಭರಣ
‘ಸ್ವಚೇತನ’ ಯೋಜನೆಯಡಿ 5 ಸಾವಿರ ವಿಕಲ ಚೇತನರಿಗೆ ದ್ವಿಚಕ್ರ ವಾಹನ
ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ
30 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ರೂ. ಸಾಲ
ಬೆಂಗಳೂರಿನ ಅಭಿವೃದ್ಧಿಗೆ 10 ಸಾವಿರ ಕೋಟಿ. ರೂ.
ಚರ್ಮಗಂಟು ರೋಗ ತಡೆಗಟ್ಟಲು ರಾಜ್ಯಾದ್ಯಂತ 1 ಕೋಟಿಗೂ ಅಧಿಕ ಜಾನುವಾರುಗಳಿಗೆ ಲಸಿಕೆ, ರೋಗದಿಂದ ಬಾಧಿತವಾದ ರಾಸುಗಳ ಮಾಲೀಕರಿಗೆ ಪರಿಹಾರಕ್ಕೆ ಒಟ್ಟು 55 ಕೋಟಿ ರೂ.
9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂ. ಪ್ರೋತ್ಸಾಹಧನ
ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವ ವಿದ್ಯಾಲಯ ಸ್ಥಾಪನೆ
ಹಾವೇರಿಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರದಲ್ಲಿ ಎಂಜಿನಿಯರಿಂಗ್ ಕಾಲೇಜು
ಮುಂದಿನ 2 ವರ್ಷಗಳಲ್ಲಿ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್ / ಡೀಸೆಲ್ ಆಧರಿತ ಮೋಟಾರ್ ಅಳವಡಿಕೆ. ಇದಕ್ಕಾಗಿ ತಲಾ 50 ಸಾವಿರ ರೂ. ಸಹಾಯ ಧನ
‘ಯಶಸ್ವಿನಿ ಯೋಜನೆ’ ಮರು ಜಾರಿ. 32 ಲಕ್ಷ ರೈತರ ನೋಂದಣಿ
ರಾಜ್ಯಾದ್ಯಂತ ವಿವಿಧ ನೀರಾವರಿ ಯೋಜನೆಗಳ ಜಾರಿಗೆ ಒಟ್ಟು 25 ಸಾವಿರ ಕೋಟಿ ರೂ. ಅನುದಾನ
ಮಹಿಳಾ ಉದ್ದಿಮೆದಾರರಿಗೆ 5 ಕೋಟಿ ವರೆಗೆ ಶೇ. 4ರ ಬಡ್ಡಿ ದರದಲ್ಲಿ ಸಾಲ
ರಾಜ್ಯದ 9 ಸ್ಥಳಗಳಲ್ಲಿ ನೂತನವಾಗಿ ಕೈಗಾರಿಕಾ ವಸಹತುಗಳ ಸ್ಥಾಪನೆ
ಬೆಂಗಳೂರಿನ ಸುತ್ತಮುತ್ತ ವಿಶ್ವ ದರ್ಜೆಯ ‘ಪ್ಲಗ್‌ & ಪ್ಲೇ’ ಕೈಗಾರಿಕಾ ಪಾರ್ಕ್ ಸ್ಥಾಪನೆ
ಸಾಧನೆ ಮಾಡುವ ವಿವಿಗಳಿಗೆ ತಲಾ 50 ಲಕ್ಷ ರೂ. ಪ್ರೋತ್ಸಾಹ ಧನ
ರಾಜ್ಯಾದ್ಯಂತ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ.
ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು
ರಾಯಚೂರಿನಲ್ಲಿ AIIMS ಮಾದರಿ ಆಸ್ಪತ್ರೆ, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಐವಿಎಫ್‌ ಕ್ಲಿನಿಕ್‌ ಪ್ರಾರಂಭ
ರೈತರಿಗಾಗಿ ‘ಭೂ ಸಿರಿ’ ನೂತನ ಯೋಜನೆ ಘೋಷಣೆ: ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಸಹಾಯಧನ ಹಾಗೂ ‘ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ
‘ಸಹಸ್ರ ಸರೋವರ’ ಯೋಜನೆ ಅಡಿ 1,000 ಸಣ್ಣ ಸರೋವರಗಳ ಅಭಿವೃದ್ಧಿ

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement