ಕರ್ನಾಟಕ ಬಜೆಟ್‌ 2023-24 : ಆರು ಹೊಸ ಇಎಸ್ಐ ಆಸ್ಪತ್ರೆಗಳು, ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

posted in: ರಾಜ್ಯ | 0

ಬೆಂಗಳೂರು: 6 ಹೊಸ ಇಎಸ್ಐ ಆಸ್ಪತ್ರೆಗಳು, ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಅನೇಕ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಹಾಗೂ 45 ತಾಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
2023-24 ನೇ ಸಾಲಿನ ಬಜೆಟ್ ನಲ್ಲಿ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 15151 ಕೋಟಿ ರೂ.ಅನುದಾನ ನೀಡಿದ್ದು, ಈ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟಿದ್ದಾರೆ.
ಶೃಂಗೇರಿ, ಯಳಂದೂರು, ಖಾನಾಪುರ, ಆನೇಕಲ್, ಶಿರಹಟ್ಟಿ, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿರುವ ಆರೋಗ್ಯ ಕೇಂದ್ರಗಳು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪ ಮಾಡಲಾಗಿದ್ದು, ಇದಕ್ಕಾಗಿ 781 ಕೋಟಿ ಅನುದಾನ ನೀಡಲಾಗಿದೆ.
ತುಮಕೂರು, ಬೆಂಗಳೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆಯ ಪ್ರಸ್ತಾಪ ಮಾಡಲಾಗಿದೆ. PM-ABHM ಅಡಿಯಲ್ಲಿ ತೃತೀಯ ಹಂತದ ಆರೈಕೆಗಾಗಿ ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ಕೋಲಾರ, ರಾಮನಗರ, ವಿಜಯನಗರ, ದೊಡ್ಡಬಳ್ಳಾಪುರ ಆಸ್ಪತ್ರೆಗಳಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಬ್ಲಾಕ್ ಹಾಗೂ ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಹೊಸದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ ಪ್ರಸ್ತಾಪ ಮಾಡಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement