ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕಿರಣಕುಮಾರ ರಾಜೀನಾಮೆ

ತುಮಕೂರು: ಬಿಜೆಪಿ ಮಾಜಿ ಶಾಸಕ ಕಿರಣಕುಮಾರ ಶನಿವಾರ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ವೈಯಕ್ತಿಕ ಕಾರಣದಿಂದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರುವಿನ ಗಾಂಧಿಪೇಟೆಯ ಕಿರಣಕುಮಾರ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದು, ಈ ಹಿನ್ನಲೆಯಲ್ಲಿಯೇ ಅವರು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗ್ರೀನ್ ಆಸ್ಕರ್ - ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement