ಕ್ರಿಕೆಟ್ ಪಂದ್ಯದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ: ಇಬ್ಬರಿಗೆ ಚೂರಿಯಿಂದ ಇರಿದು ಕೊಲೆ

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಈ ಘಟನೆ ನಡೆದ ವರದಿಯಾಗಿದ್ದು, ಕೊಲೆಯಾದವರನ್ನು ಭರತ ಹಾಗೂ ಪ್ರತೀಕ ಎಂದು ಗುರುತಿಸಲಾಗಿದೆ.
ಶಿವರಾತ್ರಿ ಪ್ರಯುಕ್ತ ಬಿಜೆಪಿ ಮುಖಂಡರಾದ ಧೀರಜ್​ ಎಂಬವರು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದು, ಬೆಳಗ್ಗೆಯಿಂದ ಕ್ರಿಕೆಟ್ ಪಂದ್ಯಾವಳಿಗಳು ಸುಸೂತ್ರವಾಗಿ ನಡೆದಿತ್ತು. ಮಧ್ಯಾಹ್ನದ ಪಂದ್ಯ ನಡೆಯುತ್ತಿದ್ದ ವೇಳೆ ಕ್ರಿಕೆಟ್ ಮೈದಾನದಲ್ಲಿ ಕಾರನ್ನು ನಿಲ್ಲಿಸಿದ ವಿಚಾರಕ್ಕೆ ಜಗಳ ನಡೆದಿತ್ತು. ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಮೈದಾನದಲ್ಲಿ ಕಾರು ನಿಲ್ಲಿಸಿದ್ದನ್ನು ಭರತ್ ಹಾಗೂ ಪ್ರತೀಕ್ ಪ್ರಶ್ನಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿತ್ತು. ಈ ವೇಳೆ ಕಾರಿನ ಗಾಜು ಒಡೆಯಲಾಗಿತ್ತು‌. ನಂತರ ಪೊಲೀಸ್ ಠಾಣೆಗೆ ಹೋಗಿದೆ. ನಂತರ ಗ್ರಾಮಸ್ಥರು ಹಾಗೂ ಇತರ ಆಟಗಾರರು ಸೇರಿ ಜಗಳ ಬಿಡಿಸಿ ಎರಡೂ ಗುಂಪುಗಳನ್ನು ಸಮಾಧಾನಪಡಿಸಿದ್ದರು.
ಕೆಲಸಮಯದ ನಂತರ ಭರತ್, ಪ್ರತೀಕ್ ಬಸ್​ ಸ್ಟ್ಯಾಂಡ್​ಗೆ ಬಂದಾಗ ಅಲ್ಲಿಗೆ ಬಂದ ಗುಂಪು ಇಬ್ಬರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ನಂತರ ಸ್ಥಳ ಉದ್ವಿಗ್ನಗೊಂಡಿದ್ದು ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದರು. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement