ಬೆಂಗಳೂರು: ತೆಲುಗಿನ ಖ್ಯಾತ ನಟ, ರಾಜಕಾರಣಿ ನಂದಮೂರಿ ತಾರಕರತ್ನ ಇನ್ನಿಲ್ಲ

ಬೆಂಗಳೂರು: ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ (39) ನಿಧನರಾಗಿದ್ದಾರೆ.
ಹೃದಯಘಾತದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕಿತ್ಸೆ ಪಡೆಯುತ್ತಿದ್ದ ನಂದಮೂರಿ ತಾರಕರತ್ನ (Nandamuri Taraka Ratna) ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಇವರು ಹೆರಾಂತ ತೆಲುಗು ನಟ ಹಾಗೂ ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿಆರ್‌ ಮೊಮ್ಮಗ.
ಜನವರಿ 28 ರಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ನ.ರಾ. ಲೋಕೇಶ ಅವರು ಕುಪ್ಪಂನಲ್ಲಿ ಆರಂಭಿಸಿದ್ದ ಪಾದಯಾತ್ರೆಯಲ್ಲಿ ನಂದಮೂರಿ ತಾರಕರತ್ನ ಭಾಗವಹಿಸಿದ್ದರು. ನಟ ನಂದಮೂರಿ ಅವರು ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದರು. ಅವರಿಗೆ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಕುಪ್ಪಂನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು.
ಅವರಿಗೆ ಹೃದಯಾಘಾತವಾಗಿದೆ ಎಂಬುದು ವೈದ್ಯಕೀಯ ತಪಾಸಣೆವೇಳೆ ತಿಳಿದುಬಂದಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿತ್ತು. ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ನಂತರ ಆಂಜಿಯೋಗ್ರಾಮ್ ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿತ್ತು. ಆದರೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ. ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
1983ರ ಫೆಬ್ರವರಿ 22ರಂದು ಜನಿಸಿದ್ದ ತೆಲುಗು ನಟ ತಾರಕರತ್ನ ಅವರು ನಂದಮೂರಿ ಮೋಹನ್‌ಕೃಷ್ಣ, ನಂದಮೂರಿ ಶಾಂತಿ ಮೋಹನ್ ದಂಪತಿಯ ಪುತ್ರ, ಹೆಸರಾಂತ ನಟ, ಮಾಜಿ ಮುಖ್ಯಮಂತ್ರಿ ಎನ್‌ಟಿಆರ್‌ ಮೊಮ್ಮಗ ತಾರಕರತ್ನ ಅವರು 2012ರಲ್ಲಿ ಅಲೇಖ್ಯಾ ರೆಡ್ಡಿ ಎನ್ನುವವರನ್ನು ಮದುವೆಯಾಗಿದ್ದರು. 2002ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಒಕಟೋ ನಂಬರ್ ಕುರ್ರಾಡು’ ಎಂಬುದು ಅವರ ಮೊದಲ ಸಿನಿಮಾ. ‘ಯುವ ರತ್ನ’, ‘ತಾರಕ್​’, ‘ಭದ್ರಾದಿ ರಾಮುಡು’, ‘ನಂದೀಶ್ವರಡು’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿ ಟಾಲಿವುಡ್​ನಲ್ಲಿ ಖ್ಯಾತಿ ಪಡೆದಿದ್ದಾರೆ. ಅಮರಾವತಿ ಚಿತ್ರಕ್ಕಾಗಿ ತಾರಕರತ್ನ ಅವರಿಗೆ 2009ರಲ್ಲಿ ಆಂಧ್ರದ ಪ್ರತಿಷ್ಠಿತ ನಂದಿ ಅವಾರ್ಡ್‌ (ಬೆಸ್ಟ್‌ ವಿಲನ್‌) ಪ್ರಶಸ್ತಿ ದೊರೆತಿದೆಅಲ್ಲದೆ ಇತ್ತೀಚೆಗೆ ರಾಜಕೀಯದಲ್ಲೂ ಸಕ್ರಿಯರಾಗಿದ್ದರು.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement