ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌

posted in: ರಾಜ್ಯ | 0

ಬೆಂಗಳೂರು: ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಹೇಳಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ ಮಾಡುವುದಾಗಿ ಘೋಷಣೆ ಮಾಡುತ್ತೇನೆ. ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಬರೆದಿದ್ದಾರೆ.
ಇತ್ತೀಚಿಗೆ ಇಂಧನ ಸಚಿವ ಸುನೀಲಕುಮಾರ ಮತ್ತು ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಬಿಲ್ಲವ ಸಮಾಜದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು. ಈ ವೇಳೆ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವುದಾಗಿ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ನಿಗಮ ಘೋಷಣೆ ಆಗಿರಲಿಲ್ಲ. ಇದು ಬಿಲ್ಲವ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದೆ. ಈಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌ ಮಾಡಿದ್ದು ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಒಳಮೀಸಲು ವಿರೋಧಿಸಿ ಪ್ರತಿಭಟನೆ: ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಲಾಠಿ ಚಾರ್ಜ್

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement