ಎಂಥ ಲೋಕವಯ್ಯಾ…47 ವರ್ಷದ ವ್ಯಕ್ತಿಯ ಮದುವೆಯ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ 16 ವರ್ಷದ ಬಾಲಕಿ ಮೇಲೆ ಹಲ್ಲೆ ನಡೆಸಿ, ಕೂದಲು ಹಿಡಿದು ರಸ್ತೆಯಲ್ಲಿ ಎಳೆದೊಯ್ದ ವ್ಯಕ್ತಿ: ದೃಶ್ಯ ವೀಡಿಯೊದಲ್ಲಿ ಸೆರೆ

ರಾಯ್‌ಪುರ: ಛತ್ತೀಸ್‌ಗಢದ ರಾಯ್‌ಪುರದ ಗುಧಿಯಾರಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ರಸ್ತೆಯಲ್ಲಿ ಎಳೆದೊಯ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಗುಧಿಯಾರಿ ಪ್ರದೇಶದಲ್ಲಿ ಶನಿವಾರ ಸಂಜೆ ಮಧ್ಯವಯಸ್ಕನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಇರಿತದ ಗಾಯಗಳೊಂದಿಗೆ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ.
ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದು ಘಟನೆಯ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸಲು ಕಾರಣವಾಯಿತು. ಪ್ರಾಥಮಿಕ ತನಿಖೆಯಲ್ಲಿ, ಪೊಲೀಸರು 16 ವರ್ಷದ ಸಂತ್ರಸ್ತ ಅಪ್ರಾಪ್ತ ಬಾಲಕಿ ಮತ್ತು ಅವಳ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಗುರುತಿಸಿದ್ದಾರೆ, ಈ ಸಂಬಂಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಗುಧಿಯಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರ ನಿರಂತರ ನಿಗಾದಲ್ಲಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗರವಾಲ್ ಪ್ರಕಾರ, ಸಂತ್ರಸ್ತ ಬಾಲಕಿ ಆರೋಪಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಯನ್ನು ಓಂಕಾರ್ ತಿವಾರಿ ಅಲಿಯಾಸ್ ಮನೋಜ್ (47) ಎಂದು ಗುರುತಿಸಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ, ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ವರದಿಯ ಪ್ರಕಾರ, 16 ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು. ಗುಧಿಯಾರಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗರವಾಲ್ ಪ್ರಕಾರ, ಸಂತ್ರಸ್ತೆ ಆರೋಪಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಯನ್ನು ಓಂಕಾರ್ ತಿವಾರಿ ಅಲಿಯಾಸ್ ಮನೋಜ್ (47) ಎಂದು ಗುರುತಿಸಲಾಗಿದೆ.
ಘಟನೆಯ ಬಗ್ಗೆ ವಿವರಗಳನ್ನು ಹಂಚಿಕೊಂಡ ಎಸ್‌ಎಸ್‌ಪಿ, ಸಂತ್ರಸ್ತ ಬಾಲಕಿ ಕೆಲಸ ತೊರೆಯುವುದಾಗಿ ಹೇಳಿದ ನಂತರ ಕೋಪಗೊಂಡ ಆರೋಪಿ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಿದರು.

ಏತನ್ಮಧ್ಯೆ, ಆರೋಪಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಸಂತ್ರಸ್ತೆಯ ತಾಯಿ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು ಎಂಬುದನ್ನು ಪೊಲೀಸ್ ಮೂಲಗಳು ಖಚಿತಪಡಿಸಿವೆ.
ಮದುವೆ ಪ್ರಸ್ತಾಪ ತಿರಸ್ಕರಿಸಿದ್ದರಿಂದ ಕೋಪಗೊಂಡ ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಆಕೆಯ ಕೂದಲನ್ನು ಜಗ್ಗಿ ಹಿಡಿದು ಬೀದಿಯಲ್ಲಿ ಅವಳನ್ನು ಎಳೆದೊಯ್ದಿದ್ದಾನೆ ಎಂದು ಹೇಳಲಾಗಿದೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರ ನಿರಂತರ ವೀಕ್ಷಣೆಯಲ್ಲಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ತನಿಖೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement