ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಟೆಸ್ಟ್, ಏಕದಿನ ಸರಣಿಗೆ ಭಾರತದ ತಂಡ ಪ್ರಕಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಟೆಸ್ಟ್‌ಗಳಿಗೆ ತಂಡವನ್ನು ಭಾನುವಾರ (ಫೆಬ್ರವರಿ 19) ಪ್ರಕಟಿಸಿದೆ. ಅಲ್ಲದೆ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್‌ ಸರಣಿಯ ನಂತರ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಭಾರತೀಯ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ನಾಗ್ಪುರ ಮತ್ತು ದೆಹಲಿ ಟೆಸ್ಟ್‌ಗಳಲ್ಲಿ ಗೆಲುವು ದಾಖಲಿಸಿರುವ ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ರಣಜಿ ಫೈನಲ್‌ ಪಂದ್ಯಕ್ಕಾಗಿ ಮೊದಲು ಟೆಸ್ಟ್ ವೇಳೆ ತಂಡದಿಂದ ಬಿಡುಗಡೆಯಾಗಿದ್ದ ವೇಗಿ ಜಯದೇವ್ ಉನದ್ಕತ್ ಅವರನ್ನು ಟೆಸ್ಟ್‌ ಹಾಗೂ ಏಕದಿನ ಎರಡೂ ತಂಡಗಳಿಗೆ ಮತ್ತೆ ಕರೆಸಿಕೊಳ್ಳಲಾಗಿದೆ.
ಕೋಲ್ಕತ್ತಾದಲ್ಲಿ ಬಂಗಾಳ ವಿರುದ್ಧದ ರಣಜಿ ಟ್ರೋಫಿ ಫೈನಲ್‌ನಲ್ಲಿ ಉನದ್ಕತ್ ಸೌರಾಷ್ಟ್ರವನ್ನು ಮುನ್ನಡೆಸಿದರು. ತಂಡವು ಸಮಗ್ರ ಪ್ರದರ್ಶನವನ್ನು ನೀಡಿತು ಮತ್ತು ಉನಾನದ್ಕತ್ 9/129 ಉತ್ತಮ ಬೌಲಿಂಗ್‌ ಸಾಧನೆಯೊಂದಿಗೆ ಪಂದ್ಯದ ಆಟಗಾರ ಪುರಸ್ಕಾರ ಪಡೆದರು ಹಾಗೂ ಅವರ ತಂಡ ಸೌರಾಷ್ಟ್ರ ಒಂಬತ್ತು ವಿಕೆಟ್‌ಗಳಿಂದ ಫೈನಲ್‌ ಗೆದ್ದಿತು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಮಾರ್ಚ್ 17 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್‌ಗೆ ಟೆಸ್ಟ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾರತದ ನಾಯಕ ರೋಹಿತ್ ಶರ್ಮಾ ಕುಟುಂಬದ ಬದ್ಧತೆಯಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಲಭ್ಯರಿರುತ್ತಾರೆ. ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ 3ನೇ ಮತ್ತು 4ನೇ ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್‌ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಸ್. ಭರತ್ (ವಿಕೆಟ್‌ ಕೀಪರ್‌), ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಆರ್. ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್ , ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕತ್
ಮೂರನೇ ಟೆಸ್ಟ್ ಪಂದ್ಯ ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ಮಾರ್ಚ್ 1 ರಿಂದ ನಡೆಯಲಿದೆ.
ಭಾರತದ ಏಕದಿನ ತಂಡ
ರೋಹಿತ್ ಶರ್ಮಾ (ಸಿ), ಶುಭಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ, ಕೆ.ಎಲ್. ರಾಹುಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್‌ ಸುಂದರ್, ವೈ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.
ಮೊದಲ ಏಕದಿನ ಪಂದ್ಯ ಮಾರ್ಚ್ 17 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement