ನಾನು ಗೋಮಾಂಸ ತಿನ್ನುತ್ತೇನೆ, ಬಿಜೆಪಿಯಲ್ಲಿದ್ದೇನೆ : ಬಿಜೆಪಿ ಮುಖಂಡನ ಹೇಳಿಕೆ

ಗುವಾಹಟಿ: ಕೇಸರಿ ಪಕ್ಷವು ಗೋಮಾಂಸ ಸೇವನೆಗೆ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ ಮತ್ತು ನನಗೆ ಪಕ್ಷದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ ಎಂದು ಮೇಘಾಲಯದ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ದೇಶದಲ್ಲಿ ಯಾವುದೇ ಚರ್ಚ್ ದಾಳಿಗೆ ಒಳಗಾಗಿದ್ದನ್ನು ನೋಡಿಲ್ಲ ಎಂದು ಹೇಳಿದ್ದಾರೆ.
ಮೇಘಾಲಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಐಎಎನ್ಎಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಮೇಘಾಲಯದ ಬಿಜೆಪಿ ರಾಜ್ಯಾಧ್ಯಕ್ಷ ಅರ್ನೆಸ್ಟ್ ಮಾವ್ರಿ (Ernest Mavri) , ನಾನು ಗೋಮಾಂಸ ತಿನ್ನುತ್ತೇನೆ ಮತ್ತು ನಾನು ಬಿಜೆಪಿಯಲ್ಲಿದ್ದೇನೆ, ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಮೇಘಾಲಯದ ಜನತೆ ಈ ಬಾರಿ ಬಿಜೆಪಿ ಜೊತೆಗಿದ್ದಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತಿದ್ದೇನೆ. ಮಾರ್ಚ್ 2 ರಂದು ನೀವು ಅದನ್ನು ನೋಡುತ್ತೀರಿ ಎಂದು ಅವರು ಹೇಳಿದರು.
ಕ್ರೈಸ್ತ ಧರ್ಮವನ್ನು ಮುಖ್ಯವಾಗಿ ಅನುಸರಿಸುವ ಮೇಘಾಲಯದ ಜನರು ಗೋಮಾಂಸ ನಿಷೇಧ, ಸಿಎಎ ಮತ್ತು ಇತರ ವಿಷಯಗಳಲ್ಲಿ ಬಿಜೆಪಿಯ ಕಠಿಣ ನಿಲುವುಗಳನ್ನು ಒಪ್ಪಿಕೊಳ್ಳಲು ಸಿದ್ಧರಾಗಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ “ಉತ್ತಮ ಪ್ರದರ್ಶನ” ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ನಾವು ರಾಜ್ಯದ ಎಲ್ಲಾ 60 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ನಾವು ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದ್ದೇವೆ ಮತ್ತು ಚುನಾವಣಾ ಫಲಿತಾಂಶದ ನಂತರ ಇದು ಗೊತ್ತಾಗಲಿದೆ ಎಂದು ಹೇಳಿದರು.
ಐದು ವರ್ಷಗಳಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಮಾಡಿದ “ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಸಿದೆ ಮತ್ತು ಕೇಸರಿ ಪಕ್ಷವು “ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ” ಹೊಂದಿದೆ. ಕಳೆದ ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯಲ್ಲಿ ನಾವು ಸಲ್ಲಿಸಿದ ಸಾಕಷ್ಟು ಆರ್‌ಟಿಐ ಅರ್ಜಿಗಳ ಮೂಲಕ, ಪ್ರಸ್ತುತ ಆಡಳಿತದಲ್ಲಿ ಮೇಘಾಲಯದಲ್ಲಿ ಎಷ್ಟು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದನ್ನು ನಾವು ನೋಡಿದ್ದೇವೆ. ನಮ್ಮ ಬಳಿ ಎಲ್ಲ ದಾಖಲೆಗಳೂ ಇವೆ ಎಂದು ಅವರು ಹೇಳಿದ್ದಾರೆ.
ಮೇಘಾಲಯದಲ್ಲಿ ಫೆಬ್ರವರಿ 27ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಮುಖ ಸುದ್ದಿ :-   ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement