ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೂರು ದಿನಗಳ ರಾಜ್ಯಪ್ರವಾಸಕ್ಕಾಗಿ ಇಂದು, ಭಾನುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.
ಇಂದು ಭಾನುವಾರ ರಾತ್ರಿ ದೆಹಲಿಯಿಂದ ಮಂಗಳೂರಿಗೆ ಆಗಮಿಸುವ ಅವರು, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ, ಸೋಮವಾರ ಬೆಳಿಗ್ಗೆ ಉಡುಪಿಯಲ್ಲಿ ಬಿಜೆಪಿಯ ಬೂತ್ ಮಟ್ಟದ ಸಮಾವೇಶ ಹಾಗೂ ಮಧ್ಯಾಹ್ನ ಬೈಂದೂರಿನಲ್ಲಿ ಸಾರ್ವಜನಿಕ ಸಭೆ, ಸಂಜೆ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಹಾಗೂ ಶೃಂಗೇರಿಯಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ನಂತರ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಂಗಳವಾರ ಫೆಬ್ರವರಿ ೨೧ ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಸಭೆ, ಮಧ್ಯಾಹ್ನ ಬೇಲೂರಿನಲ್ಲಿ ಸಾರ್ವಜನಿಕ ಸಭೆ ಹಾಗೂ ಸಂಜೆ ಹಾಸನದಲ್ಲಿ ಬೂತ್ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅದೇ ದಿನ ರಾತ್ರಿ ದೆಹಲಿಗೆ ವಾಪಸಾಗಲಿದ್ದಾರೆ. ಈ ಎಲ್ಲ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಾಲ್ಗೊಳ್ಳಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ