ಮಂಗಳೂರು: ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ನಿನ್ನೆ, ಭಾನುವಾರ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಭಾನುವಾರ ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಅರುಣ್ ಸಿಂಗ್ ಅವರು ಬಂದಿಳಿದಿದ್ದರು. ಮಂಗಳೂರಿನ ಓಷ್ಯನ್ ಪಾರ್ಲ್ ಹೋಟೇಲಿನಲ್ಲಿ ವಾಸ್ತವ್ಯ ಹೂಡಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ