
ಮುಂಬೈ: ತಮ್ಮ ಪ್ರತಿಸ್ಪರ್ಧಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆ ಹೆಸರು ಮತ್ತು ಚಿಹ್ನೆಯನ್ನು ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಮನವಿಯನ್ನು ಶೀಘ್ರವಾಗಿ ಪಟ್ಟಿ ಮಾಡುವಂತೆ ಪ್ರಸ್ತಾಪಿಸಿದರು.
ಆದಾಗ್ಯೂ, ಸಿಜೆಐ ಯಾವುದೇ ಆದೇಶವನ್ನು ನೀಡಲು ನಿರಾಕರಿಸಿದರು.” ನಿಯಮವು ಎಡ, ಬಲ ಅಥವಾ ಮಧ್ಯದಲ್ಲಿ ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತದೆ. ಸರಿಯಾದ ಪ್ರಕ್ರಿಯೆಯ ಮೂಲಕ ನಾಳೆ ಬನ್ನಿ” ಎಂದು ಪೀಠ ಹೇಳಿದೆ.
ಶುಕ್ರವಾರ ಚುನಾವಣಾ ಆಯೋಗವು ಏಕನಾಥ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿದೆ ಮತ್ತು ಅದಕ್ಕೆ “ಬಿಲ್ಲು ಮತ್ತು ಬಾಣ” ಚುನಾವಣಾ ಚಿಹ್ನೆಯನ್ನು ನಿಗದಿಪಡಿಸಲು ಆದೇಶಿಸಿದೆ, ಬಾಳ್ ಠಾಕ್ರೆ ಸ್ಥಾಪಿಸಿದ ಶಿವಸೇನೆ ಈಗ ಇಬ್ಭಾಗವಾಗಿ ಉದ್ಧವ್ ಠಾಕ್ರೆ ನೇತೃತ್ವದ ಒಂದು ಬಣ ಹಾಗೂ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತ್ಥ್ವದ ಇನ್ನೊಂದು ಬಣವಾಗಿ ಮಾರ್ಪಟ್ಟಿದ್ದು,ಬಹುಸಂಖ್ಯಾತ ಶಿವಸೇನೆ ಶಾಸಕರು ಹಾಗೂ ಸಂಸದರು ಏನಕಾಥ ಶಿಂಧೆ ಜೊತೆಗಿದ್ದಾರೆ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ.
ಶಿಂಧೆ ಅವರು ಜೂನ್‌ನಲ್ಲಿ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದರು, 40 ಕ್ಕೂ ಹೆಚ್ಚು ಸೇನಾ ಶಾಸಕರೊಂದಿಗೆ ಬಂಡಾಯವೆದ್ದು ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಜೊತೆ ಸೇರಿ ಉದ್ಧವ್ ಠಾಕ್ರೆ ರಚಿಸಿರುವ ಸರ್ಕಾರವನ್ನು ಉರುಳಿಸಿದರು.



ನಿಮ್ಮ ಕಾಮೆಂಟ್ ಬರೆಯಿರಿ