ಕಾಂಗ್ರೆಸ್‌ ಸೇರಿದ ಬಿಜೆಪಿ ಮಾಜಿ ಶಾಸಕ ಕಿರಣಕುಮಾರ್, ಜೆಡಿಎಸ್‌ನ ಸಂದೇಶ ನಾಗರಾಜ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಮ್ಮುಖದಲ್ಲಿ ತುಮುಕೂರು ಜಿಲ್ಲೆಯ ಬಿಜೆಪಿಯ ಮಾಜಿ ಶಾಸಕ ಕಿರಣಕುಮಾರ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಮೈಸೂರಿನ ಸಂದೇಶ ನಾಗರಾಜ ಇಂದು, ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಅಲ್ಲದೆ, ತುಮಕೂರು ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರಾದ ಎಚ್. ನಿಂಗಪ್ಪ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಸುಬ್ರಹ್ಮಣ್ಯ ಸಹ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಡಿಸಿಎಂ ಡಾ ಜಿ.ಪರಮೇಶ್ವರ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಮೊದಲಾದವರಿದ್ದರು.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತದಡಿ ಬಂದರಿನಲ್ಲಿ ದುರಂತ: ಬೋಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement