ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ ಮೇಸ್ತಾ ಸಾವಿನ ಬಳಿಕ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ಕುರಿತಂತೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರದ ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ.
ಈಗ ಶಿರಸಿಯ 112, ಹೊನ್ನಾವರದ ಒಬ್ಬರು ಮತ್ತು ಕುಮಟಾದ ಒಬ್ಬರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯಲಿದೆ. ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಆದರೂ, 112 ಜನರ ಮೇಲಿನ ಮೂರು ಪ್ರಕರಣಗಳು ಬಾಕಿ ಇದ್ದವು. ಅಂದು ಶಾಸಕ ಹಾಗೂ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ ರಾಜ್ಯ ಬಿಜೆಪಿ ಸರ್ಕಾರ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದೆ.
ಬಿಜೆಪಿ ಕಾರ್ಯಕರ್ತರು, ಭಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಕೆಲ ತಿಂಗಳ ಹಿಂದೆ ರಾಜ್ಯ ಸರ್ಕಾರ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಪ್ರಕಣಗಳನ್ನು ಹಿಂಪಡೆದಿತ್ತು. ಈ ಪ್ರಕರಣವನ್ನು ಶಿರಸಿಯ ವಕೀಲರಾದ ಸದಾನಂದ ಭಟ್ ಅವರು ನ್ಯಾಯಾಲಯದಲ್ಲಿ ನಿರ್ವಹಿಸುತ್ತಿದ್ದರು. ಈ ಪ್ರಕರಣಗಳಲ್ಲಿ ಜಿಲ್ಲೆಯ 174 ಜನ ಆರೋಪ ಮುಕ್ತರಾಗಿ ನಿರಾಳರಾಗಿದ್ದರು.
ಈ ಕುರಿತಂತೆ ವಿಧಾನ ಸಭಾಸದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಿಂದಲೂ ಪ್ರಕಟಣೆ ಹೊರಡಿಸಲಾಗಿದೆ. ಕಾಗೇರಿಯವರು ಅಮಾಯಕರ ಮೇಲಿನ ಪ್ರಕರಣ ವಾಪಸ್ ಪಡೆಯುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಮಾತನಾಡಿದ ಫಲವಾಗಿ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ