WPL 2023: ಮಹಿಳೆಯರ ಪ್ರೀಮಿಯರ್ ಲೀಗ್‌ ಟೈಟಲ್‌ ಹಕ್ಕು ಪಡೆದುಕೊಂಡ ಟಾಟಾ ಗ್ರೂಪ್

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2023 ರ ಟೈಟಲ್‌ ಹಕ್ಕುಗಳನ್ನು ಟಾಟಾ ಗ್ರೂಪ್ ಪಡೆದುಕೊಂಡಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಮಂಗಳವಾರ (ಫೆಬ್ರವರಿ 21) ಪ್ರಕಟಿಸಿದ್ದಾರೆ.
ಈ ಸುದ್ದಿಯನ್ನು ಜಯ್ ಶಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟಾಟಾ ಗ್ರುಪ್‌ (TataGroup) ಅನ್ನು ಉದ್ಘಾಟನಾ ಡಬ್ಲ್ಯುಪಿಎಲ್ (WPL)ನ ಟೈಟಲ್‌ ಪ್ರಾಯೋಜಕರಾಗಿ ಘೋಷಿಸಲು ನಾನು ಸಂತೋಷಪಡುತ್ತೇನೆ. ಅವರ ಬೆಂಬಲದೊಂದಿಗೆ, ನಾವು ಮಹಿಳಾ ಕ್ರಿಕೆಟ್ ಅನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬಹುದು ಎಂಬ ವಿಶ್ವಾಸ ನಮಗಿದೆ ಎಂದು ಬರೆದಿದ್ದಾರೆ.
ಮಾರ್ಚ್ 4 ರಂದು ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಬ್ಲಾಕ್ಬಸ್ಟರ್ ಪಂದ್ಯದೊಂದಿಗೆ WPL-2023 ಪ್ರಾರಂಭವಾಗುತ್ತದೆ. ಅದರ ಮೊದಲ ಋತುವಿನಲ್ಲಿ, ಡಬ್ಲ್ಯುಪಿಎಲ್ ಒಟ್ಟು 20 ಲೀಗ್ ಪಂದ್ಯಗಳನ್ನು ಮತ್ತು ಎರಡು ಪ್ಲೇಆಫ್ ಪಂದ್ಯಗಳನ್ನು 23 ದಿನಗಳ ಕಾಲ ಆಡುತ್ತದೆ.
ಐದು ತಂಡಗಳಾದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಜ್ ಡಬ್ಲ್ಯುಪಿಎಲ್‌ನಲ್ಲಿ ಸೆಣಸಲಿವೆ. ಮಾರ್ಚ್ 5 ರಂದು ಬ್ರಬೋರ್ನ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲಿದೆ ಹಾಗೂ ಸಿಸಿಐ ಮತ್ತು ಯುಪಿ ವಾರಿಯರ್ಜ್ ತಮ್ಮ ಲೀಗ್‌ನ ಮೊದಲ ಪಂದ್ಯವನ್ನು ಗುಜರಾತ್ ಜೈಂಟ್ಸ್ ವಿರುದ್ಧ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಆಡಲಿದ್ದಾರೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂನಲ್ಲಿ ತಲಾ 11 ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಲೀಗ್ ಹಂತದ ಅಂತಿಮ ಪಂದ್ಯವು ಯುಪಿ ವಾರಿಯರ್ಜ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮಾರ್ಚ್ 21 ರಂದು ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅಮಾರ್ಚ್ 24 ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಮಹಿಳಾ ಪ್ರೀಮಿಯರ್ ಲೀಗ್ 2023 ರ ಫೈನಲ್ ಮಾರ್ಚ್ 26 ರಂದು ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಪ್ಯಾನ್ -ಆಧಾರ್ ಲಿಂಕ್ ಮಾಡುವ ಗಡುವು ವಿಸ್ತರಣೆ ಮಾಡಿದ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement