ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಅನಂತ ನಾಗ್‌ ಗೈರು: ಕುತೂಹಲ ಮೂಡಿಸಿದ ನಟನ ನಡೆ

posted in: ರಾಜ್ಯ | 0

 ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ ನಾಗ್ ಅವರು ಇಂದು, ಬುಧವಾರ ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕಾರಣಾಂತರದಿಂದ ಅವರು ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಅವರು ಆಗಮಿಸಲಿಲ್ಲ ಎಂದು ವರದಿಯಾಗಿದೆ.
ನಟ ಅನಂತ ನಾಗ್ ಅವರು ಇಂದು, ಬುಧವಾರ ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸಂಜೆ 4:30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲು ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ನಟ ಅನಂತ ನಾಗ್ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಮುಂದಿನವಾರ ಈ ಬಗ್ಗೆ ನಿರ್ಧಾರ ತಿಳಿಸುವುದಾಗಿ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ.
ಅನಂತ ನಾಗ್‌ ಬರುವುದನ್ನು ಬಿಜೆಪಿ ನಾಯಕರು ಕಾಯುತ್ತಿದ್ದರು, ಆದರೆ ಅನಂತ ನಾಗ್‌ ಬಾರದೆ ಮುಂದಿನ ವಾರ ಸೇರ್ಡಪೆಯಾಗುವುದಾಗಿ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈಗ ಅವರ ನಡೆ ಕುತೂಹಲ ಮೂಡಿಸಿದೆ. ಅವರು ಬರುವುದಿಲ್ಲ ಎಂಬ ಮಾಹಿತಿ ಸಿಕ್ಕ ತಕ್ಷಣ ಬೇರೆ ಕಾಂಗ್ರೆಸ್‌ನಿಂದ ಬಂದ ನಾಯಕರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು ಎಂದು ವರದಿಯಾಗಿದೆ.
ಅನಂತ ನಾಗ್ ಅವರು ಈ ಹಿಂದೆಯೇ ರಾಜಕೀಯ ರಂಗದಲ್ಲಿ ಸಕ್ರಿಯವಾಗಿದ್ದರು. ಜೆ.ಎಚ್. ಪಟೇಲ್ ಸರ್ಕಾದಲ್ಲಿ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. ಮಲ್ಲೇಶ್ವರಂನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement