ಹಿರಿಯ ನಟ ಪ್ರಭು ಆಸ್ಪತ್ರೆಗೆ ದಾಖಲು

ಚೆನ್ನೈ: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಖ್ಯಾತ ನಟ ಪ್ರಭು ಅವರನ್ನು ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ತಪಾಸಣೆ ನಡೆಸಿದ್ದು, ಕಿಡ್ನಿಯಲ್ಲಿ ಕಲ್ಲು ಇರುವುದು ಪತ್ತೆಯಾಗಿದೆ.
ವರದಿಗಳ ಪ್ರಕಾರ, ಪ್ರಬು ಅವರನ್ನು ತಕ್ಷಣವೇ ಶಸ್ತ್ರಚಿಕಿತ್ಸೆಗೆ ಕಳುಹಿಸಲಾಯಿತು ಮತ್ತು ಅವರಿಗೆ ಲೇಸರ್ ಎಂಡೋಸ್ಕೋಪಿ ಮಾಡಲಾಯಿತು. ಇದೀಗ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ವರದಿಯಾಗಿದೆ. ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಆಸ್ಪತ್ರೆ ನಟ ಪ್ರಭು ಅವರ ಆರೋಗ್ಯದ ಕುರಿತು ಬುಲೆಟಿನ್ ಬಿಡುಗಡೆ ಮಾಡಿದೆ. ಪ್ರಭು ಈಗ ಸಂಪೂರ್ಣ ಆರೋಗ್ಯವಾಗಿದ್ದು, ಸಾಮಾನ್ಯ ಶಸ್ತ್ರಚಿಕಿತ್ಸೆಯ ನಡೆಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಳ ನಂತರ ಅವರು ಒಂದು ಅಥವಾ ಎರಡು ದಿನಗಳಲ್ಲಿ ಮನೆಗೆ ಮರಳುತ್ತಾರೆ ಎಂದು ಆಸ್ಪತ್ರೆಯ ಆಡಳಿತದಿಂದ ಬಿಡುಗಡೆಯಾದ ಹೇಳಿಕೆ ತಿಳಿಸಿದೆ.
ಪ್ರಭು ಅವರು ಖ್ಯಾತ ನಟ ಶಿವಾಜಿ ಗಣೇಶನ್ ಅವರ ಪುತ್ರ. ಅವರು 300 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳಿನ ಹೊರತಾಗಿ, ಅವರು ತೆಲುಗು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿಯೂ ನಟಿಸಿದ್ದಾರೆ.
ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ವಿಜಯ್ ಅಭಿನಯದ ವರಿಸು ಚಿತ್ರದಲ್ಲಿ ಪ್ರಭು ಕೊನೆಯದಾಗಿ ದೊಡ್ಡ ಪರದೆಯ ಮೇಲೆ ಕಾಣಿಸಿಕೊಂಡರು. ಇದರಲ್ಲಿ ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಅಪಹರಣ ಪ್ರಕರಣ: ಗ್ಯಾಂಗ್‌ಸ್ಟರ್‌- ರಾಜಕಾರಣಿ ಅತೀಕ್ ಅಹ್ಮದ್ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement