ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಬಾರದ ಹಿರಿಯ ನಟ ಅನಂತ ನಾಗ್ …!

ಬೆಂಗಳೂರು : ಕನ್ನಡದ ಹಿರಿಯ ನಟ ಅನಂತ ನಾಗ್  ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರು ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.
ಮಂಗಳವಾರ ಸಂಜೆ 4:30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು​ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ  ಸಚಿವರಾದ ಮುನಿರತ್ನ, ಡಾ. ಸುಧಾಕರ ಮುಂತಾದವರು ಉಪಸ್ಥಿತರಿರಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಅವರು ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ.ಮುಂದಿನವಾರ ಅವರು ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರು  ಅನಂತ ನಾಗ್‌ ಬರುವಿಕೆಗೆ ಕಾಯುತ್ತಿದ್ದರು, ಆದರೆ ಅನಂತ ನಾಗ್‌ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ರವಾನಿಸಿದ್ದಾರೆ ಎಂದು ಹೇಳಲಾಗಿದೆ. ಹಾಗೂ ಮುಂದಿನ ವಾರ ಈ ಕುರಿತು ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಅನಂತ ನಾಗ್ ಅವರಿಗೆ ರಾಜಕೀಯ ಹೊಸದಲ್ಲ. ಅವರು ಜೆ.ಎಚ್. ಪಟೇಲ್ ನೇತೃತ್ವದ ಜನತಾದಳ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. ಶಾಸಕರಾಗಿ, ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ದಿವಂಗತ ರಾಮಕೃಷ್ಣ ಹೆಗಡೆ ಅವರೊಂದಿಗೆ ಅನಂತ್ ನಾಗ್ ಅತ್ಯುತ್ತಮ ಬಾಂಧವ್ಯ ಹೊಂದಿದ್ದರು. ಜನತಾದಳ ಒಡೆದು ಹೋಳಾಗುವವರೆಗೂ ಪಕ್ಷದಲ್ಲಿದ್ದರು. 1983ರ ಅನಂತ ನಾಗ್ ಜನತಾ ಪಾರ್ಟಿಯ ಪ್ರಚಾರಕರಾಗಿದ್ದರು. 1985 ಮತ್ತು 1989ರ ಚುನಾವಣೆಯಲ್ಲಿಯೂ ಅನಂತ ನಾಗ್ ಪ್ರಚಾರ ಮಾಡಿದ್ದರು. 1989ರಲ್ಲಿ ಜನತಾದಳದಿಂದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆ ವೇಳೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಿವರಾಮ ಕಾರಂತ ಸಹ ಸ್ಪರ್ಧಿಸಿದ್ದರು. ಆದರೆ ಆ ಚುನಾವಣೆಯಲ್ಲಿ ಕಾಂಗ್ರೆಸ್‌ನ ದೇವರಾಯ ನಾಯ್ಕ ವಿರುದ್ಧ ಶಿವರಾಮ ಕಾರಂತ ಮತ್ತು ಅನಂತ ನಾಗ್ ಇಬ್ಬರು ಸೋಲು ಕಂಡಿದ್ದರು.
ನಂತರ 1994ರಲ್ಲಿ ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದಿಂದ ಗೆದ್ದ ಅನಂತ ನಾಗ್ ವಿಧಾನಸಭೆ ಪ್ರವೇಶಿಸಿದರು. ನಂತರ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದರು. 2004ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲನುಭವಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement