ಬೆಂಗಳೂರು : ಮಹದಾಯಿ ನದಿಗೆ ಹೊಸದಾಗಿ ಪ್ರಾಧಿಕಾರ ರಚನೆ ಮಾಡಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಲು ನಿರ್ಧರಿಸಿದೆ.
ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿಯಿ ಪ್ರವಾಹ ಪ್ರಾಧಿಕಾರ’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಜೇಂದ್ರ ಸಿಂಗ್ ಶೇಖಾವತ್ ಅವರು ಟ್ವೀಟ್ ಮೂಲಕ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಪ್ರಾಧಿಕಾರವು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮಾದರಿಯಲ್ಲೇ ಮಹದಾಯಿ ನ್ಯಾಯಮಂಡಳಿಯ ತೀರ್ಪಿನ ಅನುಸಾರ ರಚನೆಯಾಗಿದ್ದು, ಇದರ ಪ್ರಮುಖ ಉದ್ದೇಶವೆಂದರೆ ಪ್ರಾಧಿಕಾರದ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿದೆ.
ಮಹದಾಯಿ ನ್ಯಾಯಾಧಿಕರಣ ಆಗಸ್ಟ್ 14, 2018 ರ ತನ್ನ ತೀರ್ಪಿನಲ್ಲಿ ಪ್ರಾಧಿಕಾರ ರಚನೆ ಬಗ್ಗೆ ಪ್ರಸ್ತಾಪಿಸಿತ್ತು. ಅದರಂತೆ ಕೇಂದ್ರ ಸಂಪುಟವು ಈ ಪ್ರಾಧಿಕಾರ ರಚನೆಗೆ ಒಪ್ಪಿಗೆ ನೀಡಿದೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು, ಮಹದಾಯಿ ಪ್ರವಾಹ ಪ್ರಾಧಿಕಾರ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. “ಇದು ಮಹದಾಯಿ ಜಲ ವಿವಾದ ನ್ಯಾಯಮಂಡಳಿಯ ತೀರ್ಪು ಮತ್ತು ನಿರ್ಧಾರಗಳ ಅನುಸರಣೆ, ಅನುಷ್ಠಾನಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ನಡುವೆ ಪರಸ್ಪರ ನಂಬಿಕೆ ಮತ್ತು ವಿಶ್ವಾಸದ ವಾತಾವಣ ಬೆಳೆಯಲು ಇದು ನೆರವಾಗಲಿದೆ. ಈ ಮೂಲಕ ಈ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಗೆ ಜಲ ಸಂಪನ್ಮೂಲಗಳ ಸಮರ್ಪಕ ಬಳಕೆ ಇದು ಖಾತರಿಪಡಿಸುತ್ತದೆ ಎಂದು ತಿಳಿಸಿದ್ದಾರೆ.
ಮಹದಾಯಿ ಜಲ ವಿವಾದ ಸಂಬಂಧ ಪ್ರಾಧಿಕಾರ ರಚನೆ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ವಾಗತಿಸಿದ್ದಾರೆ. ಪ್ರಾಧಿಕಾರ ಸ್ಥಾಪನೆಗೆ ಅನುಮತಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತು ಕೇಂದ್ರ ಜಲಶಕ್ತಿ ಇಲಾಖೆಯ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಮಹದಾಯಿ ನ್ಯಾಯಾಧಿಕರಣ (MWDT) ಆಗಸ್ಟ್ 2018 ರಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವೆ 38.74 tmc ನೀರನ್ನು ಹಂಚಿಕೆ ಮಾಡುವ ಅಂತಿಮ ತೀರ್ಪು ಪ್ರಕಟಿಸಿತು. ಕರ್ನಾಟಕದ ಪಾಲು 13.46 tmc ಅಡಿ ನೀರು ಹಂಚಿಕೆ ಮಾಡಿದೆ.
ಮಹಾದಾಯಿ ನದಿ ನೀರನ್ನು ತಿರುಗಿಸುವ ಮೂಲಕ ಕಳಸ ಮತ್ತು ಬಂಡೂರಿ ನಾಲಾ ನಿರ್ಮಿಸಿ ಬತ್ತಿದ ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು ರಾಜ್ಯವು ಯೋಜಿಸಿದೆ. ನ್ಯಾಯಮಂಡಳಿಯು ಗೋವಾಕ್ಕೆ 24 ಟಿಎಂಸಿ ಮತ್ತು ಮಹಾರಾಷ್ಟ್ರಕ್ಕೆ 1.33 ಟಿಎಂಸಿ ಅಡಿ ಹಂಚಿಕೆ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ