ರೋಹಿಣಿ ಸಿಂಧೂರಿ Vs ಡಿ.ರೂಪಾ : ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಡಿ. ರೂಪಾಗೆ ಕೋರ್ಟ್ ನಿರ್ಬಂಧ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ.
ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ಕೋರಿ ರೋಹಿಣಿ ಸಿಂಧೂರಿ ಅವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ 74ನೇ ಸಿಟಿ ಸಿವಿಲ್ ಕೋರ್ಟ್ ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಡಿ ರೂಪಾ ಹಾಗೂ ಮಾಧ್ಯಮಗಳು ಸೇರಿದಂತೆ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದೆ. ಡಿ.ರೂಪಾ ಅವರಿಗೆ ನೋಟಿಸ್ ನೀಡಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.
ರೋಹಿಣಿ ಸಿಂಧೂರಿ ತಮ್ಮ ಅರ್ಜಿಯಲ್ಲಿ ಡಿ. ರೂಪಾ ಅವರು ಸೇರಿದಂತೆ ತಮ್ಮ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದ ಮಾಧ್ಯಮಗಳು ಸೇರಿ 66 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದರು. ಡಿ. ರೂಪಾ ಬಿಡುಗಡೆ ಮಾಡಿದ ಫೋಟೋಗಳನ್ನು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದರು.
ಅವರ ಮನವಿ ಪುರಸ್ಕರಿಸಿದ ಕೋರ್ಟ್, ಡಿ ರೂಪಾ ಹಾಗೂ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿರ ಹಾಗೂ ನೋಟಿಸ್ ಜಾರಿ ಮಾಡಿದೆ ಹಾಗೂ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement