ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ: ಮೂರನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷ ಈ ಬಾರಿ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ.
ಈ ಹಿಂದೆ ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2 ಸಾವಿರ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಇಂದು, ಶುಕ್ರವಾರ ಮತ್ತೆ ಮೂರು ಪ್ರಮುಖ ಘೋಷಣೆಗಳನ್ನು ಮಾಡಿದೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ 3ನೇ ಅನ್ನಭಾಗ್ಯ ಭರವಸೆ ಘೋಷಿಸಿದೆ. ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬದ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ಕೊಡುವುದಾಗಿ ಪ್ರಕಟಿಸಿದೆ..
ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ’ ಎಂದು ಹೇಳಿದ್ದಾರೆ.

ಅನ್ನ ಭಾಗ್ಯದ ಅಕ್ಕಿ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಸಿದ್ದಾರೆ. ಆದ್ದರಿಂದ ಮೂರನೇ ಗ್ಯಾರಂಟಿ ಪ್ರಕಟಿಸುತ್ತಿದ್ದೇವೆ. ಜನರ ಹಸಿವು ನೀಗಿಸಲು ಅನ್ನಭಾಗ್ಯ ಅಕ್ಕಿ (Rice) ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಕೊಡಲು ಕಾಂಗ್ರೆಸ್ ಮೂರನೇ ಗ್ಯಾರಂಟಿ ನೀಡಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದರು.
ನಂತರ 2019ರಲ್ಲಿ ಬಂದ ಬಿಜೆಪಿ ಸರ್ಕಾರ ಅದನ್ನು 5 ಕೆಜಿಗೆ ಇಳಿಸಿತ್ತು. ಅದಕ್ಕೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವ್ಯಾಪಕವಾಗಿ ಟೀಕೆ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ.

ನಾವು ಹಿಂದೆ ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಕೇಂದ್ರ ಸರ್ಕಾರ ಮೂರು ರೂಪಾಯಿಗೆ ಕೊಡುತ್ತದೆ. ನಾವು ಖರೀದಿ ಮಾಡಿ ಉಚಿತವಾಗಿ ಕೊಡುತ್ತೇವೆ. ಇದು ಕೇಂದ್ರ ಸರ್ಕಾರದ ಯೋಜನೆ ಎಂದು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದಕ್ಕಾಗಿಯೇ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

2.5 / 5. 2

ಶೇರ್ ಮಾಡಿ :

  1. Kannada

    ಅನ್ನಭಾಗ್ಯ ನಿಜಕ್ಕೂ ಒಂದು ದೊಡ್ಡ ಯೋಜನೆ, ಲಕ್ಷಾಂತರ ಬಡವರ ಹೊಟ್ಟೆ ತುಂಬುತ್ತಿದ್ದ ಅಕ್ಷಯ ಯೋಜನೆ ಎಂದರೆ ತಪ್ಪಾಗಲಾರದು… ಆದರೆ ವಿತರಣೆಯಲ್ಲಿ ದಿಡೀರ್ ಇಳಿಕೆ ಬೇಸರ ತಂದಿತ್ತು.. ಮತ್ತೆ ಅದೇ ರೀತಿ ಸಿಗುವಂತಾಗಲಿ…

ನಿಮ್ಮ ಕಾಮೆಂಟ್ ಬರೆಯಿರಿ

advertisement