ವಿಧಾನಸಭೆಯಲ್ಲಿ ಯಡಿಯೂರಪ್ಪ ಮಾಡಿದ ಭಾಷಣ ನನಗೆ ಸ್ಫೂರ್ತಿದಾಯಕ : ಪ್ರಧಾನಿ ಮೋದಿ ಪ್ರಶಂಸೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಬಜೆಟ್ ಮೇಲಿನ ಭಾಷಣ ಚರ್ಚೆ ವೇಳೆ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ವಿದಾಯ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, . ಯಡಿಯೂರಪ್ಪ ಅವರ ಭಾಷಣ ನನಗೆ ಸ್ಫೂರ್ತಿದಾಯಕ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಪಕ್ಷನಿಷ್ಠೆ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಪ್ರಧಾನಿ ಮೋದಿಯವರು ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.
ಬಿಜೆಪಿ ಕರ್ನಾಟಕ ತನ್ನ ಟ್ವೀಟ್‌ನಲ್ಲಿ ಯಡಿಯೂರಪ್ಪ ಅವರ ಭಾಷಣವಿರುವ 21 ನಿಮಿಷದ ವೀಡಿಯೊ ಹಂಚಿಕೊಂಡಿತ್ತು. ಆ ಟ್ವೀಟ್‌ಗೆ ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿ ಕನ್ನಡ ಮತ್ತು ಇಂಗ್ಲಿಷ್‌ ಎರಡು ಭಾಷೆಗಳಲ್ಲೂ ಟ್ವೀಟ್‌ ಮಾಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಹಲವು ದಶಕಗಳಿಂದ ರಾಜ್ಯ ವಿಧಾನಸಭೆಯ ಸದಸ್ಯರಾಗಿದ್ದ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಜೆಟ್‌ ಮೇಲಿನ ಚರ್ಚೆ ವೇಳೆ ಮಾತನಾಡಿದ್ದರು. ಈ ಸಂದರ್ಭದಲ್ಲಿ ಪಕ್ಷ ಬಲಗೊಳಿಸಲು ಹಾಗೂ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಹಾಗೂ ಇದು ವಿಧಾನಸಭೆಯಲ್ಲಿ ನನ್ನ ಕೊನೆಯ ಭಾಷಣ ಎಂದು ಹೇಳಿದ್ದರು.

ಇಂದಿನ ಪ್ರಮುಖ ಸುದ್ದಿ :-   ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ನನಗೆ ಸಿಕ್ಕಷ್ಟು ಅವಕಾಶ ಇನ್ಯಾರಿಗೂ ಸಿಕ್ಕಿಲ್ಲ…
“ಯಡಿಯೂರಪ್ಪ ಅವರಿಗೆ ಅನ್ಯಾಯ ಮಾಡಿದ್ದಾರೆ ಮತ್ತು ನನ್ನನ್ನು ನಿರ್ಲಕ್ಷಿಸಿದ್ದಾರೆ ಎಂದು ಬಿಜೆಪಿಯನ್ನು ಟೀಕಿಸುವ ಕೆಲವು ಭಾಷಣಗಳನ್ನು ಕೇಳಿದ್ದೇನೆ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ನನ್ನನ್ನು ನಿರ್ಲಕ್ಷಿಸಿಲ್ಲ, ಅವರು ನನಗೆ ನೀಡಿದ ಅವಕಾಶಗಳನ್ನು ಮತ್ಯರಿಗೂ ನೀಡಿಲ್ಲ. ಪಕ್ಷ ಅವಕಾಶ ನೀಡಿದ್ದರಿಂದ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಎಂದು ಬಿಎಸ್‌ ಯಡಿಯೂರಪ್ಪ ಅವರು ತಮ್ಮ ವಿದಾಯದ ಬಜೆಟ್‌ ಭಾಷಣದಲ್ಲಿ ಹೇಳಿದ್ದರು.
ಮುಂದಿನ ಅಧಿವೇಶನದಲ್ಲಿ ನಾನು ಸದನಕ್ಕೆ ಬರುವುದಿಲ್ಲ. ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇನೆ. ಇದು ನನ್ನ ಕೊನೆಯ ಭಾಷಣ ಎಂದು ಯಡಿಯೂರಪ್ಪ ಕಲಾಪದಲ್ಲಿ ಭಾವುಕರಾಗಿ ಮಾತನಾಡಿದ್ದರು.
ಅಧಿವೇಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಎಲ್ಲಾ ಅವಕಾಶ ನೀಡಿದ್ದಾರೆ. ಅವರಿಗೆ ಚಿರಋಣಿ. ಬಿಜೆಪಿಗೆ ಬದ್ಧನಾಗಿದ್ದು ರಾಜ್ಯದ ಉದ್ದಗಲಕ್ಕೂ ಸುತ್ತಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement