ಬಿಜೆಪಿಯಿಂದ 4 ಕಡೆಯಿಂದ ವಿಜಯ ಸಂಕಲ್ಪ ಯಾತ್ರೆ, 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ

posted in: ರಾಜ್ಯ | 0

ಬೆಂಗಳೂರು: ಬಿಜೆಪಿಯು 4 ಸ್ಥಳಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಿದ್ದು, ಇದು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು, ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಾಲ್ಕು ಸ್ಥಳಗಳಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ಮಾರ್ಚ್ 1 ರಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೊದಲನೇ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮಾರ್ಚ್ 2ರಂದು ನಂದಗಢದ ಸಂಗೊಳ್ಳಿ ರಾಯಣ್ಣ ಸ್ಮಾರಕದಿಂದ ಎರಡನೇ ಯಾತ್ರೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಚಾಲನೆ ನೀಡಲಿದ್ದಾರೆ. ನಂದಗಢದಿಂದ ಹೊರಡುವ ಯಾತ್ರೆಯು ಕಿತ್ತೂರು ಚೆನ್ನಮ್ಮ ಜನಿಸಿದ ಕಿತ್ತೂರಿಗೂ ಹೋಗಲಿದೆ ಎಂದು ಮಾಹಿತಿ ನೀಡಿದರು.
ಮಾರ್ಚ್ 3ರಂದು ಬೀದರ ಜಿಲ್ಲೆಯ ಬಸವ ಕಲ್ಯಾಣದ ನೂತನವಾಗಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪದ ಸ್ಥಳದಿಂದ ಮೂರನೇ ವಿಜಯ ಸಂಖಲ್ಪ ಯಾತ್ರೆ ಆರಂಭವಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಅಲ್ಲದೆ, ಬೆಂಗಳೂರು ದೇವನಹಳ್ಳಿಯ ನಾಡಪ್ರಭು ಕೆಂಪೇಗೌಡ ಪ್ರತಿಮೆ ಸ್ಥಳದಿಂದ ನಾಲ್ಕನೇ ಯಾತ್ರೆ ಹೊರಡಲಿದ್ದು, ಇದಕ್ಕೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ ಎಂದರು.
ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾದ್ಯಕ್ಷ ರಾಜ್ಯ ಅಧ್ಯಕ್ಷ ನಲೀನಕುಮಾರ ಕಟೀಲು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮೊದಲಾದವರು 4 ಯಾತ್ರೆಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮಾರ್ಚ್ 25ರಂದು ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದಲ್ಲಿ ಈ ಬೃಹತ್‌ ರ್ಯಾಲಿ ನಡೆಯಲಿದೆ. ಬಿಜೆಪಿ ಸರ್ಕಾರಗಳ ಸಾಧನೆ, ಕಾಂಗ್ರೆಸ್‍ನ ಹುಸಿ ಭರವಸೆ- ಭ್ರಷ್ಟಾಚಾರವನ್ನು ಜನರಿಗೆ ತಿಳಿಸುತ್ತೇವೆ ಎಂದರು.
ರಾಜ್ಯದ ಎಲ್ಲ 31 ಜಿಲ್ಲೆಗಳ 224 ವಿಧಾನಸಭಾ ಕ್ಷೇತ್ರಗಳ ಸಂಪರ್ಕ ಈ ವೇಳೆ ನಡೆಯಲಿದೆ. ನಾಲ್ಕು ರಥಗಳ ಮೂಲಕ ಒಟ್ಟು 8000 ಕಿ.ಮೀನಷ್ಟು. ಯಾತ್ರೆ ಸಂಚರಿಸಲಿದೆ. ಈ ವೇಳೆ 80ಕ್ಕೂ ಹೆಚ್ಚು ರ್ಯಾಲಿಗಳು, 75ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳು, 150ಕ್ಕೂ ಹೆಚ್ಚು ರೋಡ್ ಶೋಗಳನ್ನು ಆಯೋಜಿಸಲಾಗುತ್ತದೆ. ಯಾತ್ರೆಯ ಅವಧಿ 20 ದಿನಗಳಾಗಿದ್ದು, ಕನಿಷ್ಠ 150 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಇದರ ಗುರಿಯಾಗಿದೆ ಎಂದರು.
ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ಅರುಣ ಶಹಾಪುರ, ಸಚ್ಚಿದಾನಂದಮೂರ್ತಿ ಪತ್ರಿಕಾಗೋಷ್ಠಿಯಲ್ಲಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವನರ್ತಕ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement