ಬೆಂಗಳೂರಿನ ವಂದೇ ಭಾರತ ಎಕ್ಸ್‌ಪ್ರೆಸ್‌ಗೆ ಕಲ್ಲು ತೂರಾಟ, ಕಿಟಕಿಗೆ ಹಾನಿ

ಬೆಂಗಳೂರು: ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕೆಲವರು ಕಲ್ಲು ತೂರಾಟ ನಡೆಸಿದ ಪರಿಣಾಮ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲು ಮೈಸೂರಿನಿಂದ ತಮಿಳುನಾಡಿನ ರಾಜಧಾನಿ ಚೆನ್ನೈಗೆ ತೆರಳುತ್ತಿತ್ತು. ಯಾರಿಗೂ ಗಾಯಗಳಾಗಿಲ್ಲ, ಪೊಲೀಸ್ ಪ್ರಕರಣ ದಾಖಲಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.
ರೈಲು ಸಂಖ್ಯೆ 20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೋಚ್‌ನ ಎರಡು ಕಿಟಕಿಗಳು ಹಾನಿಗೊಳಗಾಗಿವೆ. ಶನಿವಾರ ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ” ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮೇಲೆ ಜನರು ಕಲ್ಲು ತೂರಾಟ ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ವರದಿಯಾಗುತ್ತಿವೆ.
ರೈಲ್ವೇ ಸಂರಕ್ಷಣಾ ಪಡೆ ಜನವರಿಯಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ 21 ಪ್ರಕರಣಗಳನ್ನು ಮತ್ತು ಫೆಬ್ರವರಿಯಲ್ಲಿ 13 ಪ್ರಕರಣಗಳನ್ನು ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ ದಾಖಲಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement