ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಇಬ್ಬರು ವಶಕ್ಕೆ

posted in: ರಾಜ್ಯ | 0

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಾಲೂಕಿನ ಹಾಡುವಳ್ಳಿಯಲ್ಲಿ ಎಂಬಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೊಲೆಯಾದ ಶಂಭು ಭಟ್ಟ ಅವರ ಹಿರಿಯ ಸೊಸೆ ವಿದ್ಯಾ ಶ್ರೀಧರ ಭಟ್ಟ ಹಾಗೂ ಆಕೆಯ ತಂದೆ ಶ್ರೀಧರ ಜನಾರ್ಧನ ಭಟ್ಟ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.
ಶುಕ್ರವಾರ ಶಂಭು ಹೆಗಡೆ (65), ಪತ್ನಿ ಮಾದೇವಿ ಹೆಗಡೆ ( 58), ಮಗ ರಾಘವೇಂದ್ರ ಹೆಗಡೆ (40) ಹಾಗೂ ಪತ್ನಿ ಕುಸುಮಾ ಭಟ್ (32)  ಅವರನ್ನು ಬರ್ಬರವಾಗಿ ಕೊಲೆಗೈಯಲಾಗಿತ್ತು. ಕೊಲೆಯ ಪ್ರಮುಖ ಆರೋಪಿ ಎಂದು ಅನುಮಾನಿಸಲಾಗಿರುವ ವಿನಯ ಶ್ರೀಧರ ಭಟ್ಟ ಎಂಬಾತ ನಾಪತ್ತೆಯಾಗಿದ್ದು, ಪತ್ತೆ ಕಾರ್ಯಕ್ಕೆ ಮೂರು ತಂಡವನ್ನು ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಶಂಭು ಭಟ್ಟರ ಹಿರಿಯ ಪುತ್ರ ಶ್ರೀಧರ ಭಟ್ಟ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದರು. ಹಾಗೂ ಕೆಲ ತಿಂಗಳ ಹಿಂದೆ ಇದೇ ಕಾರಣಕ್ಕೆ ಮೃತಪಟ್ಟಿದ್ದರು. ಅವರ ಮರಣದ 14ನೇ ದಿನದಿಂದ ಆರಂಭವಾಗಿದ್ದ ಆಸ್ತಿ ಜಗಳ ನಾಲ್ವರ ಕೊಲೆಯಲ್ಲಿ ಪರ್ಯಾವಸನಗೊಂಡಿದೆ ಎಂದು ಹೇಳಲಾಗುತ್ತಿದೆ. ಶ್ರೀಧರ  ಮೃತಪಟ್ಟ ನಂತರ ಸೊಸೆಯ ಸಹೋದರ ವಿನಯ ಆಗಾಗ ಹಾಡುವಳ್ಳಿಗೆ ಹೋಗಿ ಪಾಲು ಕೊಡುವಂತೆ ಜಗಳ ಮಾಡುತ್ತಿದ್ದುದರಿಂದ ಶಂಭು ಭಟ್ಟರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ತಾವು ಹಾಗೂ ತಮ್ಮ ಪತ್ನಿ ಹೀಗೆ ಆಸ್ತಿ ಪಾಲು ಮಾಡಿ ಕೊಟ್ಟಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ

ಶುಕ್ರವಾರ ಬೆಳಿಗ್ಗೆ ಕೊಟ್ಟಿಗೆ ಹಾಗೂ ಕೆರೆ ವಿಚಾರವಾಗಿ ಜಗಳ ನಡೆದಿದ್ದು, ಅದು ಮಧ್ಯಾಹ್ನ ಈ ಬರ್ಬರ ಕೃತ್ಯದ ವರೆಗೆ ಎಂದು ಹೇಳಲಾಗುತ್ತಿದೆ. ಹಿರಿಯ ಸೊಸೆ ವಿದ್ಯಾ ಹಾಗೂ ಆಕೆಯ ತಂದೆ ಶ್ರೀಧರ ಅವರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದ್ದು, ಅವರ ಕುಮ್ಮಕ್ಕಿನಿಂದ ವಿನಯ ಕೊಲೆ ಮಾಡಿದ್ದಾನೆಯೇ ಎಂಬ ದೃಷ್ಟಿಕೋನದಿಂದಲೂ ತನಿಖೆ ನಡೆದಿದೆ ಎನ್ನಲಾಗಿದೆ.
ನಾಲ್ವರನ್ನು ಯಾವುದೇ ಪ್ರತಿರೋಧ ಇಲ್ಲದೆ ಕೊಲೆ ಮಾಡಿದ್ದನ್ನು ಅವಲೋಕಿಸಿದರೆ ನಾಲ್ವರನ್ನು ಕೊಚ್ಚಿದ ರೀತಿ ಒಂದೇ ತೆರನಾಗಿ ಕಂಡುಬಂದಿದೆ. ತಲೆಯ ಹಿಂಭಾಗ, ಮುಖ, ತಲೆ ಕಡಿಯಲಾಗಿದೆ. ಬೇರೆ ದೇಹದ ಭಾಗಕ್ಕೆ ಗಾಯಗಳಾಗಿಲ್ಲ. ಇದು ಇದರಲ್ಲಿ ಹೆಚ್ಚಿನವರು ಪಾಲ್ಗೊಂಡಿದ್ದಾರೆಯೇ ಅಥವಾ ಪೂರ್ವ ತಯಾರಿಯಲ್ಲಿ ಬರಲಾಗಿತ್ತೇ ಎಂಬುದರ ಬಗ್ಗೆ ಸಂಶಯ ಬರುವಂತೆ ಮಾಡುತ್ತದೆ. ತನಿಖೆ ನಂತರ ಎಲ್ಲವೂ ಸ್ಪಷ್ಟವಾಗಲಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಶಾಸಕ ಮಾಡಾಳು ವಿರೂಪಾಕ್ಷಪ್ಪ ಐದು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ : ನ್ಯಾಯಾಲಯ ಆದೇಶ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement